Mark 12:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಉಪದೇಶಕನೇ, ವಿವಾಹಿತನೊಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ಸಹೋದರನು ಮದುವೆ ಮಾಡಿಕೊಂಡು ಸತ್ತುಹೋದ ಸಹೋದರನಿಗಾಗಿ ಸಂತಾನ ಪಡೆಯಬೇಕೆಂದು ಮೋಶೆಯು ಬರೆದಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಪ್ರಶ್ನೆಮಾಡಿದ್ದೇನಂದರೆ, “ಬೋಧಕನೇ, ‘ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು’ ಮೋಶೆಯು ನಮಗಾಗಿ ಬರೆದಿಟ್ಟಿದ್ದಾನಲ್ಲವೇ.
Kannada BSI Bible 2016
ಬೋಧಕನೇ, ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಅವನ ಸಹೋದರನು ಅವನ ಹೆಂಡತಿಯನ್ನು ತಕ್ಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು ಎಂದು ಮೋಶೆಯು ನಮಗೆ ಬರೆದಿರು ತ್ತಾನಷ್ಟೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ಆತನಿಗೆ ಪ್ರಶ್ನೆಮಾಡಿದ್ದೇನಂದರೆ - ಬೋಧಕನೇ, ಅಣ್ಣನಾದವನು ಮಕ್ಕಳಿಲ್ಲದೆ ಹೆಂಡತಿಯನ್ನು ಬಿಟ್ಟು ಸತ್ತರೆ ಆಕೆಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
Kannada Bible (KNCL) BSI 2016
“ಬೋಧಕರೇ, ಒಬ್ಬನು ಮಕ್ಕಳಿಲ್ಲದೆ ಸತ್ತರೆ, ಅವನ ಹೆಂಡತಿಯನ್ನು ಅವನ ತಮ್ಮನು ಮದುವೆ ಮಾಡಿಕೊಂಡು ಅಣ್ಣನಿಗೆ ಸಂತಾನ ಪಡೆಯಬೇಕು,’ ಎಂದು ಮೋಶೆ ನಮಗಾಗಿ ಬರೆದಿಟ್ಟಿದ್ದಾನಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಬೋಧಕರೇ, ‘ಒಬ್ಬ ಮನುಷ್ಯನ ಸಹೋದರನು ಮಕ್ಕಳಿಲ್ಲದೆ ವಿಧವೆಯನ್ನು ಬಿಟ್ಟು ಸತ್ತರೆ, ಅವನ ಸಹೋದರನು ಅವನ ಹೆಂಡತಿಯನ್ನು ತೆಗೆದುಕೊಂಡು ತನ್ನ ಸಹೋದರನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದಿರುತ್ತಾನಷ್ಟೆ.