Mark 12:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸತ್ತಜನರ ಪುನರುತ್ಥಾನದ ಬಗ್ಗೆ ದೇವರು ಹೇಳಿರುವುದನ್ನು ನೀವು ಖಂಡಿತವಾಗಿ ಓದಿದ್ದೀರಿ. ದೇವರು ಮೋಶೆಗೆ, ‘ನಾನೇ ಅಬ್ರಹಾಮನ ದೇವರು, ಇಸಾಕನ ದೇವರು ಮತ್ತು ಯಾಕೋಬನ ದೇವರು’ ಎಂದು ಹೇಳಿದ್ದನ್ನು ಮೋಶೆಯ ಪುಸ್ತಕದಲ್ಲಿರುವ ಉರಿಯುವ ಪೊದೆಯ ಅಧ್ಯಾಯದಲ್ಲಿ ಕಾಣಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಸತ್ತವರು ಬದುಕಿ ಬರುತ್ತಾರೆಂಬುದನ್ನು ಕುರಿತು ಹೇಳಬೇಕಾದರೆ ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಮಾತನಾಡಿದನೆಂದು ನೀವು ಮೋಶೆಯ ಗ್ರಂಥದಲ್ಲಿ ಓದಲಿಲ್ಲವೋ?’
Kannada BSI Bible 2016
ಸತ್ತವರು ಎದ್ದು ಬರುವದರ ವಿಷಯವಾಗಿ--ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದನೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಸತ್ತವರು ಬದುಕಿ ಏಳುತ್ತಾರೆಂಬ ವಿಷಯದಲ್ಲಿ ಹೇಳಬೇಕಾದರೆ - ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಎಂದು ದೇವರು ಮೋಶೆಗೆ ನುಡಿದದ್ದನ್ನು ನೀವು ಮೋಶೆಯ ಗ್ರಂಥದಲ್ಲಿ ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿ ಓದಲಿಲ್ಲವೇ?
Kannada Bible (KNCL) BSI 2016
ಇದಲ್ಲದೆ ಸತ್ತವರು ಪುನರುತ್ಥಾನವಾಗುವ ವಿಷಯದಲ್ಲಿ ಹೇಳುವುದಾದರೆ: ‘ನಾನು ಅಬ್ರಹಾಮನಿಗೆ ದೇವರು, ಇಸಾಕನಿಗೆ ದೇವರು, ಯಕೋಬನಿಗೆ ದೇವರು’ ಎಂದು ದೇವರು ಮೋಶೆಗೆ ಹೇಳಿದ್ದನ್ನು ಮೋಶೆಯ ಗ್ರಂಥದಲ್ಲಿ, ‘ಉರಿಯುವ ಪೊದೆ’ಯ ಪ್ರಸ್ತಾಪವಿರುವ ಭಾಗದಲ್ಲಿ, ನೀವು ಓದಿರಬೇಕಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತವರು ಎದ್ದು ಬರುವುದರ ವಿಷಯವಾಗಿ, ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು ಆಗಿದ್ದೇನೆ’ ಎಂದು ಪೊದೆಯಲ್ಲಿ ದೇವರು ಮೋಶೆಯ ಸಂಗಡ ಹೇಗೆ ಮಾತನಾಡಿದರೆಂದು ಮೋಶೆಯ ಗ್ರಂಥದಲ್ಲಿ ನೀವು ಓದಲಿಲ್ಲವೋ?