Mark 12:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ. ಸದ್ದುಕಾಯರಾದ ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ!” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
Kannada BSI Bible 2016
ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ; ನೀವು ಹಿಡಿದ ಅಭಿಪ್ರಾಯವು ಬಹು ತಪ್ಪಾಗಿದೆ ಎಂದು ಹೇಳಿದನು.
Kannada Bible (KNCL) BSI 2016
ದೇವರು ಜೀವಿತರ ದೇವರೇ ಹೊರತು ಮೃತರ ದೇವರಲ್ಲ, ನಿಮ್ಮ ಅಭಿಪ್ರಾಯ ತೀರಾ ತಪ್ಪಾಗಿದೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಜೀವಿತರಿಗೆ ದೇವರಾಗಿದ್ದಾರೆ ಹೊರತು ಸತ್ತವರಿಗಲ್ಲ, ಆದ್ದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪುಮಾಡುತ್ತೀರಿ,” ಎಂದು ಹೇಳಿದರು.