Mark 12:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ವಾದವಿವಾದವನ್ನು ಕೇಳುತ್ತಿದ್ದ ಧರ್ಮೋಪದೇಶಕರಲ್ಲಿ ಒಬ್ಬನು ಯೇಸು ಸದ್ದುಕಾಯರಿಗೆ ಹಾಗೂ ಫರಿಸಾಯರಿಗೆ ಒಳ್ಳೆಯ ಉತ್ತರ ಕೊಟ್ಟದ್ದನ್ನು ಗಮನಿಸಿ, ಆತನ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಅತ್ಯಂತ ಮುಖ್ಯವಾದ ಆಜ್ಞೆ ಯಾವುದು?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಸ್ತ್ರಿಗಳಲ್ಲಿ ಒಬ್ಬನು ಅವರ ವಾದವನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರ ಕೊಟ್ಟನೆಂದು ತಿಳಿದು ಆತನ ಹತ್ತಿರಕ್ಕೆ ಬಂದು, “ಎಲ್ಲಾ ಆಜ್ಞೆಗಳಲ್ಲಿ ಮುಖ್ಯವಾದ್ದದು ಯಾವುದು?” ಎಂದು ಆತನನ್ನು ಕೇಳಿದರು.
Kannada BSI Bible 2016
ಆಗ ಶಾಸ್ತ್ರಿಗಳಲ್ಲಿ ಒಬ್ಬನು ಬಂದು ಅವರು ಕೂಡಿ ಕೊಂಡು ತರ್ಕಿಸುತ್ತಿರುವದನ್ನು ಕೇಳಿ ಆತನು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಆತನಿಗೆ --ಎಲ್ಲಾ ದೈವಾಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಾಸ್ತ್ರಿಗಳಲ್ಲಿ ಒಬ್ಬನು ಅವರ ತರ್ಕವನ್ನು ಕೇಳಿ ಯೇಸು ಅವರಿಗೆ ಒಳ್ಳೆಯ ಉತ್ತರ ಕೊಟ್ಟನೆಂದು ತಿಳಿದು ಹತ್ತಿರಕ್ಕೆ ಬಂದು - ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವದು ಎಂದು ಆತನನ್ನು ಕೇಳಿದ್ದಕ್ಕೆ ಯೇಸು -
Kannada Bible (KNCL) BSI 2016
ಈ ತರ್ಕವನ್ನು ಕೇಳುತ್ತಿದ್ದ ಧರ್ಮಶಾಸ್ತ್ರಿ ಒಬ್ಬನು, ಯೇಸುಸ್ವಾಮಿ ಸದ್ದುಕಾಯರಿಗೆ ಸಮರ್ಪಕವಾದ ಉತ್ತರವನ್ನು ಕೊಟ್ಟಿದ್ದನ್ನು ಮೆಚ್ಚಿ, ಅವರ ಬಳಿಗೆ ಬಂದು, “ಆಜ್ಞೆಗಳಲ್ಲೆಲ್ಲಾ ಪ್ರಪ್ರಥಮ ಆಜ್ಞೆ ಯಾವುದು?” ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಯಮ ಬೋಧಕರಲ್ಲಿ ಒಬ್ಬನು ಬಂದು ಅವರು ಕೂಡಿಕೊಂಡು ತರ್ಕಿಸುತ್ತಿರುವುದನ್ನು ಕೇಳಿ ಯೇಸು ಅವರಿಗೆ ಸರಿಯಾಗಿ ಉತ್ತರವನ್ನು ಕೊಟ್ಟನೆಂದು ತಿಳಿದು ಅವರಿಗೆ, “ಎಲ್ಲಾ ಆಜ್ಞೆಗಳಲ್ಲಿ ಮೊದಲನೆಯದು ಯಾವುದು?” ಎಂದು ಕೇಳಿದನು.