Mark 12:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ನೀವು ನಿಮ್ಮನ್ನು ಪ್ರೀತಿಸುವಂತೆ ನಿಮ್ಮ ನೆರೆಯವರನ್ನು ಪ್ರೀತಿಸಬೇಕು’ ಎಂಬುದೇ ಅತ್ಯಂತ ಮುಖ್ಯವಾದ ಎರಡನೇ ಆಜ್ಞೆ. ಇವುಗಳೇ ಅತ್ಯಂತ ಮುಖ್ಯವಾದವು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ ಎರಡನೆಯ ಆಜ್ಞೆ. ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ” ಎಂದು ಉತ್ತರ ಕೊಟ್ಟನು.
Kannada BSI Bible 2016
ನೀನು ನಿನ್ನ ನೆರೆಯ ವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದು ಅದರಂ ತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿ ಗಿಂತ ಹೆಚ್ಚಿನ ದೈವಾಜ್ಞೆಯು ಮತ್ತೊಂದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು ಎಂಬದೇ ಎರಡನೆಯ ಆಜ್ಞೆ; ಇವುಗಳಿಗಿಂತ ಹೆಚ್ಚಿನ ಆಜ್ಞೆ ಮತ್ತೊಂದಿಲ್ಲ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
“ನಿನ್ನನ್ನು ನೀನೇ ಪ್ರೀತಿಸಿಕೊಳ್ಳುವಂತೆ ನಿನ್ನ ನೆರೆಯವನನ್ನೂ ಪ್ರೀತಿಸು. ಇದೇ ಎರಡನೆಯ ಆಜ್ಞೆ. ಇವೆರಡು ಆಜ್ಞೆಗಳಿಗಿಂತ ಶ್ರೇಷ್ಠವಾದ ಆಜ್ಞೆ ಬೇರೊಂದೂ ಇಲ್ಲ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನೀನು ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು,’ ಎಂಬುದು ಅದರಂತೆಯೇ ಇರುವ ಎರಡನೆಯ ಆಜ್ಞೆಯಾಗಿದೆ. ಇವುಗಳಿಗಿಂತ ಹೆಚ್ಚಿನ ಆಜ್ಞೆಯು ಮತ್ತೊಂದಿಲ್ಲ,” ಎಂದು ಹೇಳಿದರು.