Mark 12:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು, “ಉಪದೇಶಕನೇ, ಅದು ಒಳ್ಳೆಯ ಉತ್ತರ. ನೀನು ಸರಿಯಾಗಿ ಹೇಳಿದೆ. ದೇವರೊಬ್ಬನೇ ಪ್ರಭು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆ ಶಾಸ್ತ್ರಿಯು, “ಬೋಧಕನೇ, ನೀನು ಚೆನ್ನಾಗಿ ಹೇಳಿದೆ. ಸತ್ಯವನ್ನೇ ಹೇಳಿದಿ ದೇವರು ಒಬ್ಬನೇ, ಆತನ ಹೊರತು ಬೇರೊಬ್ಬ ದೇವರಿಲ್ಲ ಎಂದು ಹೇಳಿದನು.
Kannada BSI Bible 2016
ಅದಕ್ಕೆ ಆ ಶಾಸ್ತ್ರಿಯು ಆತನಿಗೆ --ಬೋಧಕನೇ, ಒಳ್ಳೇದು. ನೀನು ಸತ್ಯವನ್ನೇ ಹೇಳಿದ್ದೀ; ಯಾಕಂದರೆ ದೇವರು ಒಬ್ಬನೇ; ಆತನ ಹೊರತು ಬೇರೊಬ್ಬನು ಇಲ್ಲವೇ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆ ಶಾಸ್ತ್ರಿಯು - ಬೋಧಕನೇ, ಚೆನ್ನಾಗಿ ಹೇಳಿದೆ; ಒಬ್ಬನೇ ಇದ್ದಾನೆ, ಆತನ ಹೊರತು ಮತ್ತೊಬ್ಬ ದೇವರಿಲ್ಲ ಎಂದು ನೀನು ಹೇಳಿದ್ದು ಸತ್ಯ.
Kannada Bible (KNCL) BSI 2016
ಇದನ್ನು ಕೇಳಿದ ಆ ಧರ್ಮಶಾಸ್ತ್ರಿ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ದೇವರು ಒಬ್ಬರೇ, ಅವರ ಹೊರತು ಬೇರೆ ದೇವರಿಲ್ಲ, ಎಂದು ನೀವು ಹೇಳಿದ್ದು ಸತ್ಯ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಆ ನಿಯಮ ಬೋಧಕನು ಯೇಸುವಿಗೆ, “ಬೋಧಕರೇ, ಚೆನ್ನಾಗಿ ಹೇಳಿದಿರಿ. ನೀವು ಹೇಳಿದ್ದು ಸತ್ಯವೇ; ಏಕೆಂದರೆ ದೇವರು ಒಬ್ಬರೇ, ಅವರ ಹೊರತು ಬೇರೊಬ್ಬರು ಇಲ್ಲ.