Mark 12:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆತನಲ್ಲದೆ ಬೇರೆ ದೇವರಿಲ್ಲ. ದೇವರನ್ನು ಪೂರ್ಣಹೃದಯದಿಂದ, ಪೂರ್ಣಬುದ್ಧಿಯಿಂದ ಹಾಗೂ ಪೂರ್ಣಶಕ್ತಿಯಿಂದ ಪ್ರೀತಿಸಬೇಕು ಮತ್ತು ಒಬ್ಬ ವ್ಯಕ್ತಿಯು ತನ್ನನ್ನು ಪ್ರೀತಿಸುವಂತೆಯೇ ಇತರರನ್ನೂ ಪ್ರೀತಿಸಬೇಕು. ನಾವು ದೇವರಿಗೆ ಅರ್ಪಿಸುವ ಪಶುಯಜ್ಞಗಳಿಗಿಂತಲೂ ಈ ಆಜ್ಞೆಗಳು ಹೆಚ್ಚು ಮುಖ್ಯವಾಗಿವೆ” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನನ್ನು ಪೂರ್ಣಹೃದಯದಿಂದಲೂ, ಪೂರ್ಣ ಬುದ್ಧಿಯಿಂದಲೂ, ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವುದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಮೇಲಾದುವು” ಅಂದನು.
Kannada BSI Bible 2016
ಆತನನ್ನು ಪೂರ್ಣ ಹೃದಯದಿಂದಲೂ ಪೂರ್ಣಗ್ರಹಿಕೆಯಿಂದಲೂ ಪೂರ್ಣಪ್ರಾಣದಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸಿ ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸು ವದು ಸಕಲ ದಹನ ಬಲಿಗಳಿಗಿಂತಲೂ ಯಜ್ಞಗಳಿಗಿಂತ ಲೂ ಹೆಚ್ಚಿನದಾಗಿದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನನ್ನು ಪೂರ್ಣಮನಸ್ಸಿನಿಂದಲೂ ಪೂರ್ಣಬುದ್ಧಿಯಿಂದಲೂ ಪೂರ್ಣಶಕ್ತಿಯಿಂದಲೂ ಪ್ರೀತಿಸುವದು ಮತ್ತು ತನ್ನನ್ನು ಪ್ರೀತಿಸಿಕೊಳ್ಳುವಂತೆ ತನ್ನ ನೆರೆಯವನನ್ನು ಪ್ರೀತಿಸುವದು ಇವೆರಡೂ ಎಲ್ಲಾ ಸರ್ವಾಂಗಹೋಮಗಳಿಗಿಂತಲೂ ಎಲ್ಲಾ ಯಜ್ಞಗಳಿಗಿಂತಲೂ ಹೆಚ್ಚಿನವು ಅಂದನು.
Kannada Bible (KNCL) BSI 2016
ಅವರನ್ನು ನಾವು ಪೂರ್ಣ ಹೃದಯದಿಂದಲೂ ಪೂರ್ಣ ಜ್ಞಾನದಿಂದಲೂ ಪೂರ್ಣ ಶಕ್ತಿಯಿಂದಲೂ ಪ್ರೀತಿಸತಕ್ಕದ್ದು. ಇದಲ್ಲದೆ ನಮ್ಮನ್ನು ನಾವು ಪ್ರೀತಿಸಿಕೊಳ್ಳುವಂತೆಯೇ ನಮ್ಮ ನೆರೆಯವರನ್ನೂ ಪ್ರೀತಿಸತಕ್ಕದ್ದು. ಇವು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಯಾಗಾದಿಗಳಿಗಿಂತಲೂ ಎಷ್ಟೋ ಮೇಲಾದುವು,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ಪ್ರೀತಿಸಿ, ತನ್ನ ನೆರೆಯವನನ್ನು ತನ್ನಂತೆಯೇ ಪ್ರೀತಿಸುವುದು ಎಲ್ಲಾ ದಹನಬಲಿಗಳಿಗಿಂತಲೂ ಯಜ್ಞಗಳಿಗಿಂತಲೂ ಹೆಚ್ಚಿನದಾಗಿದೆ,” ಎಂದನು.