Mark 12:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನ ಬುದ್ಧಿವಂತಿಕೆಯ ಉತ್ತರವನ್ನು ಕೇಳಿದ ಯೇಸು, “ನೀನು ದೇವರ ರಾಜ್ಯಕ್ಕೆ ಹತ್ತಿರವಾಗಿರುವೆ” ಎಂದನು. ಅಂದಿನಿಂದ, ಯೇಸುವಿಗೆ ಹೆಚ್ಚು ಪ್ರಶೆಗಳನ್ನು ಕೇಳಲು ಯಾರಿಗೂ ಸಾಕಷ್ಟು ಧೈರ್ಯ ಬರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ” ಎಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
Kannada BSI Bible 2016
ಅವನು ಬುದ್ಧಿ ಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು ಅವನಿಗೆ --ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆ ಮಾಡುವದಕ್ಕೆ ಯಾವ ಮನುಷ್ಯನಿಗಾದರೂ ಧೈರ್ಯವಿರಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಬುದ್ಧಿಯಿಂದ ಉತ್ತರಕೊಟ್ಟದ್ದನ್ನು ಯೇಸು ಕಂಡು - ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ ಅಂದನು. ಅಂದಿನಿಂದ ಆತನನ್ನು ಪ್ರಶ್ನೆಮಾಡುವದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.
Kannada Bible (KNCL) BSI 2016
ಅವನ ವಿವೇಕಪೂರ್ಣವಾದ ಉತ್ತರವನ್ನು ಮೆಚ್ಚಿ ಯೇಸು, “ನೀನು ದೇವರ ಸಾಮ್ರಾಜ್ಯದಿಂದ ದೂರವಿಲ್ಲ,” ಎಂದರು. ಇದಾದ ಬಳಿಕ ಯೇಸುವನ್ನು ಪ್ರಶ್ನಿಸುವುದಕ್ಕೆ ಯಾರೊಬ್ಬರೂ ಧೈರ್ಯಗೊಳ್ಳಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ವಿವೇಕದಿಂದ ಉತ್ತರ ಕೊಟ್ಟದ್ದನ್ನು ಯೇಸು ಕಂಡು ಅವನಿಗೆ, “ನೀನು ದೇವರ ರಾಜ್ಯಕ್ಕೆ ದೂರವಾದವನಲ್ಲ,” ಎಂದರು. ಅಂದಿನಿಂದ ಯೇಸುವನ್ನು ಪ್ರಶ್ನೆಮಾಡುವುದಕ್ಕೆ ಯಾರಿಗೂ ಧೈರ್ಯವಿರಲಿಲ್ಲ.