Mark 12:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ದೇವಾಲಯದಲ್ಲಿ ಉಪದೇಶಿಸುತ್ತಿದ್ದಾಗ ಆತನು ಅವರಿಗೆ, “ಕ್ರಿಸ್ತನು ದಾವೀದನ ಮಗನೆಂದು ಧರ್ಮೋಪದೇಶಕರು ಹೇಳುವುದೇಕೆ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೇವಾಲಯದಲ್ಲಿ ಉಪದೇಶಮಾಡುತ್ತಿರಲಾಗಿ ಆತನು ಅವರನ್ನು, “ಶಾಸ್ತ್ರಿಗಳು ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ ಅದು ಹೇಗೆ?
Kannada BSI Bible 2016
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ-- ಕ್ರಿಸ್ತನು ದಾವೀದನಕುಮಾರನು ಎಂದು ಶಾಸ್ತ್ರಿಗಳು ಹೇಳುವದು ಹೇಗೆ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ದೇವಾಲಯದಲ್ಲಿ ಉಪದೇಶ ಮಾಡುತ್ತಿರಲಾಗಿ ಪ್ರಶ್ನೆಮಾಡಿ - ಶಾಸ್ತ್ರಿಗಳು ಬರಬೇಕಾದ ಕ್ರಿಸ್ತನನ್ನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
Kannada Bible (KNCL) BSI 2016
ಬಳಿಕ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಉಪದೇಶಮಾಡುತ್ತಾ ಈ ಪ್ರಶ್ನೆ ಎತ್ತಿದರು: “ಅಭಿಷಿಕ್ತನಾದ ಲೋಕೋದ್ಧಾರಕನನ್ನು ಧರ್ಮಶಾಸ್ತ್ರಿಗಳು ‘ದಾವೀದನ ಪುತ್ರ’ ಎಂದು ಕರೆಯುತ್ತಾರಲ್ಲಾ! ಅದು ಹೇಗಾದೀತು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೇವಾಲಯದಲ್ಲಿ ಬೋಧಿಸುತ್ತಿದ್ದಾಗ, “ಕ್ರಿಸ್ತನು ದಾವೀದನ ಪುತ್ರನು ಎಂದು ನಿಯಮ ಬೋಧಕರು ಹೇಳುತ್ತಿರುವುದು ಹೇಗೆ?