Mark 12:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಪ್ರಭುವು ನನ್ನ ಪ್ರಭುವಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
Kannada BSI Bible 2016
ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳ ಕೆಳಗೆ ಹಾಕುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದನು.
Kannada Bible (KNCL) BSI 2016
‘ನಿನ್ನ ಶತ್ರುಗಳನ್ನು ನಾನು ನಿನ್ನ ಪಾದದಡಿಗೆ ಹಾಕುವತನಕ ನನ್ನ ಬಲಗಡೆಯಲ್ಲಿ ಆಸೀನನಾಗಿರು ಎಂದು ನನ್ನ ಪ್ರಭುವಿಗೆ ಸರ್ವೇಶ್ವರ ಹೇಳಿದ್ದಾರೆ,’ ಎಂದು ದಾವೀದನೇ ಪವಿತ್ರಾತ್ಮಪ್ರೇರಣೆಯಿಂದ ಹೇಳಿದ್ದಾನಲ್ಲಾ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾವೀದನು ತಾನೇ ಪವಿತ್ರಾತ್ಮ ಪ್ರೇರಣೆಯಿಂದ ಹೇಳಿದ್ದೇನೆಂದರೆ: “ ‘ಕರ್ತದೇವರು ನನ್ನ ಕರ್ತದೇವರಿಗೆ ಹೇಳಿದ್ದಾರೆ: “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದದಡಿಯಲ್ಲಿ ಹಾಕುವವರೆಗೆ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು.” ’