Mark 12:37 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದಾವೀದನೇ ಕ್ರಿಸ್ತನನ್ನು ‘ಪ್ರಭು’ ಎಂದು ಕರೆದಿರುವಾಗ ಕ್ರಿಸ್ತನು ದಾವೀದನ ಮಗನಾಗುವುದು ಹೇಗೆ ಸಾಧ್ಯ?” ಎಂದು ಪ್ರಶ್ನಿಸಿದನು. ಯೇಸುವಿನ ಮಾತನ್ನು ಕೇಳಿ, ಅನೇಕ ಜನರು ಬಹಳ ಸಂತೋಷಪಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾವೀದನೇ ಆತನನ್ನು ‘ಕರ್ತನೆಂದು’ ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಪ್ರಶ್ನಿಸಿದನು. ಜನರ ದೊಡ್ಡ ಸಮೂಹವು ಆತನ ಮಾತನ್ನು ಸಂತೋಷದಿಂದ ಕೇಳುತ್ತಿತ್ತು.
Kannada BSI Bible 2016
ಆದದರಿಂದ ದಾವೀದನು ತಾನೇ ಆತನನ್ನು ಕರ್ತ ನೆಂದು ಕರೆಯುವಾಗ ಆತನು ಅವನ ಮಗನಾಗುವದು ಹೇಗೆ ಎಂದು ಹೇಳಿದನು. ಸಾಮಾನ್ಯ ಜನರು ಸಂತೋ ಷದಿಂದ ಆತನ ಮಾತುಗಳನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾವೀದನೇ ಆತನನ್ನು ಒಡೆಯನೆಂದು ಹೇಳಿರುವಲ್ಲಿ ಆತನು ಅವನಿಗೆ ಮಗನಾಗುವದು ಹೇಗೆ? ಎಂದು ಕೇಳಿದನು.
Kannada Bible (KNCL) BSI 2016
ದಾವೀದನೇ, ಕ್ರಿಸ್ತನನ್ನು ‘ನನ್ನ ಪ್ರಭು’ ಎಂದು ಕರೆದಿರುವಲ್ಲಿ ಆತನು ದಾವೀದನ ಪುತ್ರನಾಗಿರುವುದು ಹೇಗೆ?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ದಾವೀದನು ತಾನೇ ಅವರನ್ನು, ‘ನನ್ನ ಕರ್ತದೇವರೇ’ ಎಂದು ಕರೆಯುವಾಗ, ಆತನು ದಾವೀದನ ಪುತ್ರನಾಗುವುದು ಹೇಗೆ?” ಎಂದು ಕೇಳಿದರು. ಜನಸಮೂಹವು ಸಂತೋಷದಿಂದ ಯೇಸುವಿನ ಮಾತುಗಳನ್ನು ಆಲಿಸುತ್ತಿತ್ತು.