Mark 12:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಭಾಮಂದಿರಗಳಲ್ಲಿ ಮತ್ತು ಔತಣಗಳಲ್ಲಿ ಉನ್ನತ ಆಸನಗಳನ್ನು ಬಯಸುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂತೆಯ ಬೀದಿಗಳಲ್ಲಿ ನಮಸ್ಕಾರಗಳನ್ನೂ, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳನ್ನೂ, ಔತಣಗಳಲ್ಲಿ ಪ್ರಥಮ ಸ್ಥಾನಗಳನ್ನೂ ಅವರು ಇಷ್ಟಪಡುವವರಾಗಿದ್ದಾರೆ.
Kannada BSI Bible 2016
ಸಭಾಮಂದಿರಗಳಲ್ಲಿ ಮುಖ್ಯಪೀಠಗಳನ್ನೂ ಔತಣಗಳಲ್ಲಿ ಅತ್ಯುನ್ನತವಾದ ಸ್ಥಳಗಳನ್ನೂ ಪ್ರೀತಿಸುವವರಾದ ಶಾಸ್ತ್ರಿಗಳ ವಿಷಯವಾಗಿ ಎಚ್ಚರವಾಗಿರ್ರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಭಾಮಂದಿರಗಳಲ್ಲಿ ಮುಖ್ಯಪೀಠಗಳು, ಔತಣಪ್ರಸ್ತಗಳಲ್ಲಿ ಪ್ರಥಮಸ್ಥಾನಗಳು, ಇವುಗಳಲ್ಲಿಯೇ ಅವರು ಮನಸ್ಸುಳ್ಳವರಾಗಿದ್ದಾರೆ.
Kannada Bible (KNCL) BSI 2016
“ಧರ್ಮಶಾಸ್ತ್ರಿಗಳ ಬಗ್ಗೆ ಎಚ್ಚರಿಕೆ! ಅವರು ನಿಲುವಂಗಿಗಳನ್ನು ಧರಿಸಿಕೊಂಡು ತಿರುಗಾಡುತ್ತಾರೆ; ಪೇಟೆ ಬೀದಿಗಳಲ್ಲಿ ವಂದನೋಪಚಾರಗಳನ್ನೂ ಪ್ರಾರ್ಥನಾ ಮಂದಿರಗಳಲ್ಲಿ ಉನ್ನತ ಆಸನಗಳನ್ನೂ ಔತಣ ಸಮಾರಂಭಗಳಲ್ಲಿ ಶ್ರೇಷ್ಠಸ್ಥಾನಗಳನ್ನೂ ಅಪೇಕ್ಷಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಭಾಮಂದಿರಗಳಲ್ಲಿ ಅತ್ಯುನ್ನತ ಆಸನಗಳನ್ನೂ ಔತಣಗಳಲ್ಲಿ ಮುಖ್ಯಸ್ಥಾನಗಳನ್ನೂ ಇಷ್ಟಪಡುತ್ತಾರೆ.