Mark 12:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಯಜಮಾನನು ಮತ್ತೊಬ್ಬ ಸೇವಕನನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಅವನಿಗೂ ತಲೆಯ ಮೇಲೆ ಹೊಡೆದು ಅವಮಾನ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ತೋಟದ ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಲು ಅವರು ಅವನ ತಲೆಯ ಮೇಲೆ ಹೊಡೆದು ಗಾಯಗೊಳಿಸಿ ಅಪಮಾನಮಾಡಿ ಕಳುಹಿಸಿಬಿಟ್ಟರು.
Kannada BSI Bible 2016
ತಿರಿಗಿ ಅವನು ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ಮೇಲೆ ಕಲ್ಲುಗಳನ್ನು ಎಸೆದು ತಲೆಯನ್ನು ಗಾಯಪಡಿಸಿ ಅವಮಾನದಿಂದ ವರ್ತಿಸಿ ಅವನನ್ನು ಕಳುಹಿಸಿಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಧಣಿಯು ತಿರಿಗಿ ಮತ್ತೊಬ್ಬ ಆಳನ್ನು ಅವರ ಬಳಿಗೆ ಕಳುಹಿಸಲು ಅವನನ್ನು ಅವರು ತಲೆತಲೆಯ ಮೇಲೆ ಹೊಡೆದು ಅಪಮಾನ ಪಡಿಸಿದರು.
Kannada Bible (KNCL) BSI 2016
ತೋಟದ ಯಜಮಾನ ಪುನಃ ಇನ್ನೊಬ್ಬ ಸೇವಕನನ್ನು ಕಳುಹಿಸಿದ. ಅವರು ಅವನ ತಲೆಯ ಮೇಲೆ ಹೊಡೆದು, ಅವಮಾನ ಮಾಡಿ ಕಳುಹಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ಪುನಃ ಮತ್ತೊಬ್ಬ ಸೇವಕನನ್ನು ಅವರ ಬಳಿಗೆ ಕಳುಹಿಸಿದಾಗ ಅವರು ಅವನ ತಲೆಯನ್ನು ಗಾಯಗೊಳಿಸಿ ಅವಮಾನ ಮಾಡಿ ಕಳುಹಿಸಿಬಿಟ್ಟರು.