Mark 12:40 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ವಿಧವೆಯರ ಆಸ್ತಿಯನ್ನು ಕಸಿದುಕೊಳ್ಳುತ್ತಾರೆ. ಉದ್ದುದ್ದ ಪ್ರಾರ್ಥನೆಗಳನ್ನು ಮಾಡುವುದರ ಮೂಲಕ ತಮ್ಮನ್ನು ತಾವೇ ಒಳ್ಳೆಯವರೆಂದು ತೋರಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ದೇವರು ಈ ಜನರನ್ನು ಕಠಿಣವಾಗಿ ಶಿಕ್ಷಿಸುತ್ತಾನೆ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇವರು ವಿಧವೆಯರ ಮನೆಗಳನ್ನು ದೋಚಿ ತೋರಿಕೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಿನ ದಂಡನೆಯನ್ನು ಹೊಂದುವರು” ಎಂದನು.
Kannada BSI Bible 2016
ಇವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುವವರಾದ ಇವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.
Kannada Bible (KNCL) BSI 2016
ವಿಧವೆಯರ ಮನೆಮಾರುಗಳನ್ನು ದೋಚಿಕೊಳ್ಳುವ ಈ ಜನ ನಟನೆಗಾಗಿ ದೀರ್ಘವಾಗಿ ಜಪತಪಗಳನ್ನು ಮಾಡುತ್ತಾರೆ. ಇವರನ್ನು ದೇವರು ಬಹಳ ಕಠಿಣವಾದ ದಂಡನೆಗೆ ಗುರಿಪಡಿಸುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರು ವಿಧವೆಯರ ಮನೆಗಳನ್ನು ದೋಚಿ ನಟನೆಗಾಗಿ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ, ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು,” ಎಂದರು.