Mark 12:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದಲ್ಲಿ ಕಾಣಿಕೆ ಪೆಟ್ಟಿಗೆಗಳ ಎದುರಿನಲ್ಲಿ ಕುಳಿತಿದ್ದಾಗ, ಜನರು ಪೆಟ್ಟಿಗೆಯಲ್ಲಿ ಹಣ ಹಾಕುವುದನ್ನು ಗಮನಿಸಿದನು. ಅನೇಕ ಶ್ರೀಮಂತ ಜನರು ಹೆಚ್ಚು ಹಣವನ್ನು ಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೇವಾಲಯದ ಆವರಣದಲ್ಲಿ ಕಾಣಿಕೆ ಪೆಟ್ಟಿಗೆಯ ಎದುರಿಗೆ ಕುಳಿತುಕೊಂಡು ಜನರು ಅದರಲ್ಲಿ ಹಣ ಹಾಕುವುದನ್ನು ಗಮನಿಸುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಹೆಚ್ಚೆಚ್ಚು ಹಣ ಹಾಕುತ್ತಿದ್ದರು.
Kannada BSI Bible 2016
ಯೇಸು ಬೊಕ್ಕಸದ ಎದುರಾಗಿ ಕೂತುಕೊಂಡು ಜನರು ಹೇಗೆ ಬೊಕ್ಕಸದಲ್ಲಿ ಹಣ ಹಾಕುತ್ತಿದ್ದಾ ರೆಂಬದನ್ನು ನೋಡುತ್ತಿದ್ದನು; ಅನೇಕ ಐಶ್ವರ್ಯವಂತರು ಹೆಚ್ಚೆಚ್ಚಾಗಿ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಬೊಕ್ಕಸದ ಮನೆಗೆ ಎದುರಾಗಿ ಕೂತುಕೊಂಡು ಜನರು ಬೊಕ್ಕಸದಲ್ಲಿ ಹಣ ಹಾಕುವದನ್ನು ನೋಡುತ್ತಿದ್ದನು. ಅನೇಕ ಮಂದಿ ಐಶ್ವರ್ಯವಂತರು ಬಹಳ ಬಹಳ ಹಾಕುತ್ತಿರಲು
Kannada Bible (KNCL) BSI 2016
ಯೇಸುಸ್ವಾಮಿ ದೇವಾಲಯದಲ್ಲಿ ಕಾಣಿಕೆಪೆಟ್ಟಿಗೆಗಳಿಗೆ ಎದುರಾಗಿ ಕುಳಿತಿದ್ದರು. ಜನರು ಅದರಲ್ಲಿ ಹಣಹಾಕುವ ರೀತಿ ಅವರ ಕಣ್ಣಿಗೆ ಬಿತ್ತು. ಧನವಂತರನೇಕರು ಹೆಚ್ಚು ಹೆಚ್ಚು ಹಣವನ್ನು ಹಾಕುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಕಾಣಿಕೆ ಪೆಟ್ಟಿಗೆಯ ಎದುರಾಗಿ ಕುಳಿತುಕೊಂಡು ಜನರು ಹೇಗೆ ಅದರಲ್ಲಿ ಹಣ ಹಾಕುತ್ತಿದ್ದಾರೆಂಬುದನ್ನು ಗಮನಿಸುತ್ತಿದ್ದರು. ಅನೇಕ ಐಶ್ವರ್ಯವಂತರು ಹೆಚ್ಚು ಹಣ ಹಾಕಿದರು.