Mark 12:43 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ತನ್ನ ಶಿಷ್ಯರನ್ನು ಬಳಿಗೆ ಕರೆದು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಕಾಣಿಕೆ ಹಾಕಿದವರೆಲ್ಲರಲ್ಲಿ ಈ ಬಡವಿಧವೆ ಹೆಚ್ಚು ಹಾಕಿದ್ದಾಳೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತಲೂ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ.
Kannada BSI Bible 2016
ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ-- ಈ ಬೊಕ್ಕಸದಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಆತನು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ನಿಮಗೆ ನಿಜವಾಗಿ ಹೇಳುತ್ತೇನೆ, ಬೊಕ್ಕಸದಲ್ಲಿ ಹಾಕಿದವರೆಲ್ಲರಲ್ಲಿ ಈ ಬಡ ವಿಧವೆ ಹೆಚ್ಚು ಹಾಕಿದ್ದಾಳೆ.
Kannada Bible (KNCL) BSI 2016
ಆಗ ಯೇಸು ತಮ್ಮ ಶಿಷ್ಯರನ್ನು ಕರೆದು, “ಕಾಣಿಕೆ ಪೆಟ್ಟಿಗೆಯಲ್ಲಿ ಹಣ ಹಾಕಿದ ಎಲ್ಲರಿಗಿಂತಲೂ ಈ ವಿಧವೆ ಹೆಚ್ಚಾಗಿ ಅರ್ಪಿಸಿದಳು ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರಿಗೆ, “ಈ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಿದವರೆಲ್ಲರಿಗಿಂತ ಈ ಬಡ ವಿಧವೆಯು ಹೆಚ್ಚಾಗಿ ಹಾಕಿದ್ದಾಳೆ ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.