Mark 12:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಉಳಿದವರಾದರೊ ತಮಗೆ ಸಾಕಾಗಿ ಉಳಿದದ್ದರಲ್ಲಿ ಸ್ವಲ್ಪ ಹಾಕಿದರು. ಈಕೆಯಾದರೊ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲ ಕೊಟ್ಟುಬಿಟ್ಟಳು. ಈಕೆಗೆ ಆ ಹಣದ ಅಗತ್ಯವಿತ್ತು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೇಗೆಂದರೆ, ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈ ವಿಧವೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದ ಎಲ್ಲವನ್ನೂ ಕಾಣಿಕೆಯಾಗಿ ಹಾಕಿದ್ದಾಳೆ” ಎಂದನು.
Kannada BSI Bible 2016
ಯಾಕಂದರೆ ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು; ಆದರೆ ಈಕೆಯು ತನ್ನ ಕೊರತೆಯಲ್ಲಿ ತನಗಿದ್ದದ್ದನ್ನೆಲ್ಲಾ ಅಂದರೆ ತನ್ನ ಜೀವನವನ್ನೆಲ್ಲಾ ಹಾಕಿದ್ದಾಳೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗೆಂದರೆ ಎಲ್ಲರು ತಮಗೆ ಸಾಕಾಗಿ ವಿುಕ್ಕದ್ದರಲ್ಲಿ ಹಾಕಿದರು; ಈಕೆಯೋ ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಹಾಕಿದಳು, ತನ್ನ ಜೀವನವನ್ನೇ ಕೊಟ್ಟುಬಿಟ್ಟಳು ಅಂದನು.
Kannada Bible (KNCL) BSI 2016
ಇವರೆಲ್ಲರೂ ತಮ್ಮ ಅಪರಿಮಿತ ಐಶ್ವರ್ಯದಿಂದ ಕಾಣಿಕೆಯಿತ್ತರು. ಈಕೆಯಾದರೋ ತನ್ನ ಕಡುಬಡತನದಲ್ಲೂ ತನ್ನಲ್ಲಿ ಇದ್ದುದೆಲ್ಲವನ್ನು ಅರ್ಪಿಸಿದಳು; ತನ್ನ ಜೀವನಾಧಾರವನ್ನೇ ಕೊಟ್ಟುಬಿಟ್ಟಳು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಎಲ್ಲರೂ ತಮ್ಮ ಸಮೃದ್ಧಿಯಲ್ಲಿ ಹಾಕಿದರು. ಆದರೆ ಈಕೆಯು ತನ್ನ ಬಡತನದಲ್ಲಿಯೂ ತನಗಿದ್ದದ್ದನ್ನೆಲ್ಲಾ ಎಂದರೆ, ತನ್ನ ಜೀವನಕ್ಕೆ ಆಧಾರವಾಗಿದ್ದುದನ್ನು ಹಾಕಿದ್ದಾಳೆ,” ಎಂದರು.