Mark 12:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದನು. ರೈತರು ಈ ಸೇವಕನನ್ನು ಕೊಂದುಹಾಕಿದರು. ಆ ಯಜಮಾನನು ಇತರ ಅನೇಕ ಸೇವಕರನ್ನು ರೈತರ ಬಳಿಗೆ ಕಳುಹಿಸಿದನು. ರೈತರು ಕೆಲವು ಸೇವಕರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಇನ್ನೊಬ್ಬ ಸೇವಕನನ್ನು ಕಳುಹಿಸಿದನು. ಇವನನ್ನು ಅವರು ಕೊಂದು ಹಾಕಿದರು. ಇನ್ನೂ ಅನೇಕರಿಗೆ ಅವರು ಹಾಗೆಯೇ ಮಾಡಿ, ಅವರಲ್ಲಿ ಕೆಲವರನ್ನು ಹೊಡೆದರು ಮತ್ತು ಕೆಲವರನ್ನು ಕೊಂದು ಹಾಕಿದರು.
Kannada BSI Bible 2016
ಅವನು ಮತ್ತೆ ಇನ್ನೊಬ್ಬನನ್ನು ಕಳುಹಿಸಿದಾಗ ಅವನನ್ನೂ ಕೊಂದರು. ಇನ್ನೂ ಆನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವ ರನ್ನು ಹೊಡೆದರು; ಕೆಲವರನ್ನು ಕೊಂದು ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಇನ್ನೊಬ್ಬನನ್ನು ಕಳುಹಿಸಲು ಅವನನ್ನು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಿದನು. ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.
Kannada Bible (KNCL) BSI 2016
ಯಜಮಾನ ಆಮೇಲೆ ಮತ್ತೊಬ್ಬ ಸೇವಕನನ್ನು ಕಳುಹಿಸಿದ. ಇವನನ್ನು ಅವರು ಕೊಂದುಹಾಕಿದರು. ಇನ್ನೂ ಅನೇಕರನ್ನು ಕಳುಹಿಸಲು, ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕಡಿದುಹಾಕಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಜಮಾನನು ಮತ್ತೊಬ್ಬ ಸೇವಕನನ್ನು ಕಳುಹಿಸಿದಾಗ ಅವರು ಅವನನ್ನು ಕೊಂದುಹಾಕಿದರು. ಯಜಮಾನನು ಬೇರೆ ಕೆಲವರನ್ನು ಕಳುಹಿಸಿದಾಗ ಅವರಲ್ಲಿ ಕೆಲವರನ್ನು ಹೊಡೆದರು, ಕೆಲವರನ್ನು ಕೊಂದುಹಾಕಿದರು.