Mark 12:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಯಜಮಾನನಿಗೆ ರೈತರ ಬಳಿಗೆ ಕಳುಹಿಸಲು ಪ್ರಿಯ ಮಗನೊಬ್ಬನೇ ಉಳಿದಿದ್ದನು. ಅವನು ಕಳುಹಿಸಬಹುದಾದ ಕೊನೆಯ ವ್ಯಕ್ತಿ ಅವನ ಸ್ವಂತ ಮಗನಾಗಿದ್ದನು. ‘ರೈತರು ನನ್ನ ಮಗನಿಗೆ ಗೌರವ ಕೊಡುತ್ತಾರೆ’ ಎಂದುಕೊಂಡು ಯಜಮಾನನು ಅವನನ್ನೇ ಕಳುಹಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನಿಗೆ ಕಳುಹಿಸಲು ಇನ್ನು ಒಬ್ಬನಿದ್ದನು. ಯಾರೆಂದರೆ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನು. ತನ್ನ ಮಗನಿಗೆ ಅವರು ಮರ್ಯಾದೆ ಕೊಡಬಹುದೆಂದು ಯಜಮಾನನು ಕೊನೆಗೆ ಅವನನ್ನು ಅವರ ಬಳಿಗೆ ಕಳುಹಿಸಿದನು.
Kannada BSI Bible 2016
ಕಡೆಯದಾಗಿ ತನಗೆ ಇನ್ನು ಅತಿ ಪ್ರಿಯನಾಗಿದ್ದ ಒಬ್ಬನೇ ಮಗನಿರಲಾಗಿ--ಅವರು ನನ್ನ ಮಗನಿಗಾದರೂ ಗೌರವ ಸಲ್ಲಿಸಾರು ಎಂದು ಅಂದುಕೊಂಡು ಅವನನ್ನು ಸಹ ಅವರ ಬಳಿಗೆ ಕಳುಹಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಇನ್ನೂ ಒಬ್ಬನಿದ್ದನು; ಯಾರಂದರೆ ಅವನ ಮುದ್ದು ಮಗನೇ. ನನ್ನ ಮಗನಿಗಾದರೂ ಮರ್ಯಾದೆ ತೋರಿಸಿಯಾರೆಂದು ಧಣಿಯು ಕಡೆಯಲ್ಲಿ ಅವನನ್ನು ಅವರ ಬಳಿಗೆ ಕಳುಹಿಸಿದನು.
Kannada Bible (KNCL) BSI 2016
ಯಜಮಾನನಿಗೆ ಇನ್ನು ಉಳಿದಿದ್ದವನೆಂದರೆ ಅವನ ಮುದ್ದುಮಗನೊಬ್ಬನೇ, “ನನ್ನ ಮಗನಿಗಾದರೂ ಅವರು ಮರ್ಯಾದೆಕೊಟ್ಟಾರು,” ಎಂದು ಭಾವಿಸಿ, ಕಟ್ಟಕಡೆಗೆ ಆ ಯಜಮಾನ ತನ್ನ ಮಗನನ್ನೇ ಅವರ ಬಳಿಗೆ ಕಳುಹಿಸಿದ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಕಡೆಯದಾಗಿ ತನಗೆ ಪ್ರಿಯನಾಗಿದ್ದ ಒಬ್ಬನೇ ಮಗನಿದ್ದನು. ‘ಅವರು ನನ್ನ ಮಗನಿಗಾದರೂ ಮರ್ಯಾದೆ ಕೊಡುವರು,’ ಎಂದು ಭಾವಿಸಿ, ಅವನನ್ನು ಅವರ ಬಳಿಗೆ ಕಳುಹಿಸಿದನು.