Mark 12:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದರೆ ರೈತರು ಒಬ್ಬರಿಗೊಬ್ಬರು, ‘ಇವನು ಯಜಮಾನನ ಮಗನು. ಈ ದ್ರಾಕ್ಷಿತೋಟದ ಹಕ್ಕುದಾರ. ನಾವು ಇವನನ್ನು ಕೊಂದರೆ, ದ್ರಾಕ್ಷಿತೋಟ ನಮ್ಮದಾಗುತ್ತದೆ’ ಎಂದುಕೊಂಡು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ಗುತ್ತಿಗೆದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು’ ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡು,
Kannada BSI Bible 2016
ಆದರೆ ಆ ಒಕ್ಕಲಿಗರು--ಇವನೇ ಬಾದ್ಯಸ್ಥನು; ಬನ್ನಿರಿ, ಇವನನ್ನು ನಾವು ಕೊಂದುಹಾಕೋಣ; ಆಗ ಸ್ವಾಸ್ಥ್ಯವು ನಮ್ಮದಾ ಗುವದು ಎಂದು ತಮ್ಮತಮ್ಮಲ್ಲಿ ಮಾತನಾಡಿಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ಒಕ್ಕಲಿಗರು - ಇವನೇ ಬಾಧ್ಯಸ್ಥನು; ಬನ್ನಿ, ಇವನನ್ನು ಕೊಂದುಹಾಕೋಣ; ಆಗ ಸ್ವಾಸ್ತ್ಯ ನಮ್ಮದಾಗುವದು ಎಂದು ಒಬ್ಬರ ಸಂಗಡಲೊಬ್ಬರು ಮಾತಾಡಿಕೊಂಡು
Kannada Bible (KNCL) BSI 2016
ಆದರೆ ಆ ಗೇಣಿದಾರರು, ‘ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ, ಇವನನ್ನು ಮುಗಿಸಿಬಿಡೋಣ. ಆಗ ಈ ಆಸ್ತಿ ನಮ್ಮದಾಗುವುದು,’ ಎಂದು ಒಳಸಂಚು ಹೂಡಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ಆ ರೈತರು, ‘ಇವನೇ ಬಾಧ್ಯಸ್ಥನು, ಬನ್ನಿರಿ, ಇವನನ್ನು ನಾವು ಕೊಂದು ಹಾಕೋಣ. ಆಗ ಆಸ್ತಿ ನಮ್ಮದಾಗುವುದು,’ ಎಂದು ತಮ್ಮ ತಮ್ಮಲ್ಲಿ ಮಾತನಾಡಿಕೊಂಡರು.