Mark 13:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ದೇವಾಲಯದಿಂದ ಹೊರಡುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು! ಈ ದೇವಾಲಯ ಎಂಥಾ ದೊಡ್ಡ ಕಲ್ಲುಗಳಿಂದ ಮಾಡಿದ ಎಂಥಾ ಸುಂದರ ಕಟ್ಟಡಗಳನ್ನು ಹೊಂದಿದೆ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ದೇವಾಲಯದಿಂದ ಹೊರಗೆ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ, “ಗುರುವೇ, ನೋಡು, ಎಂಥಾ ಅದ್ಭುತವಾದ ಕಲ್ಲುಗಳು! ಎಂಥಾ ಮಹಾಕಟ್ಟಡಗಳು!” ಎಂದು ಹೇಳಿದನು.
Kannada BSI Bible 2016
ಆತನು ದೇವಾಲಯದೊಳಗಿಂದ ಹೋಗುತ್ತಿದ್ದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ--ಬೋಧಕನೇ, ಇಲ್ಲಿ ಎಂಥಾ ತರವಾದ ಕಲ್ಲುಗಳು ಮತ್ತು ಎಂಥಾ ಕಟ್ಟಡಗಳು ಇವೆ ನೋಡು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ದೇವಾಲಯವನ್ನು ಬಿಟ್ಟು ಹೋಗುತ್ತಿರಲು ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಗುರುವೇ, ನೋಡು, ಎಂಥಾ ಕಲ್ಲುಗಳು! ಎಂಥಾ ಕಟ್ಟಣಗಳು! ಎಂದು ಹೇಳಿದನು.
Kannada Bible (KNCL) BSI 2016
ಯೇಸುಸ್ವಾಮಿ ದೇವಾಲಯದಿಂದ ಹೊರಗೆ ಬರುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು, “ಗುರುವೇ, ಅತ್ತ ನೋಡಿ; ಎಂಥ ಬಾರಿ ಕಲ್ಲುಗಳು! ಎಷ್ಟು ರಮ್ಯವಾದ ಕಟ್ಟಡಗಳು!” ಎಂದು ವರ್ಣಿಸತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ದೇವಾಲಯದೊಳಗಿಂದ ಹೊರಗೆ ಹೋಗುತ್ತಿದ್ದಾಗ ಅವರ ಶಿಷ್ಯರಲ್ಲಿ ಒಬ್ಬನು ಯೇಸುವಿಗೆ, “ಬೋಧಕರೇ, ಇಲ್ಲಿ ಎಂಥಾ ಭಾರಿ ಕಲ್ಲುಗಳು ಮತ್ತು ಎಂಥಾ ಮಹಾ ಕಟ್ಟಡಗಳು ಇವೆ ನೋಡಿರಿ!” ಎಂದನು.