Mark 13:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೀವು ಬಂಧಿಸಲ್ಪಟ್ಟು ನ್ಯಾಯವಿಚಾರಣೆಗೆ ಒಳಗಾಗುವಿರಿ. ಆದರೆ ನೀವು ಏನು ಹೇಳಬೇಕೆಂಬುದರ ಬಗ್ಗೆ ಯೋಚಿಸಬೇಡಿ, ಆ ಸಮಯದಲ್ಲಿ ದೇವರು ನಿಮಗೆ ತಿಳಿಸಿಕೊಡುವುದನ್ನೇ ಹೇಳಿರಿ. ಆಗ ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮನ್ನು ಹಿಡಿದುಕೊಂಡು ಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿಯೇ ಚಿಂತಿಸಬೇಡಿರಿ, ನೀವು ಏನು ಹೇಳಬೇಕೋ ಅದು ನಿಮಗೆ ಆ ಗಳಿಗೆಯಲ್ಲಿ ಕೊಡಲ್ಪಡುವುದು, ಏಕೆಂದರೆ ಮಾತನಾಡುವವರು ನೀವಲ್ಲ, ಆದರೆ ಪವಿತ್ರಾತ್ಮನೇ ನಿಮ್ಮ ಮೂಲಕವಾಗಿ ಮಾತನಾಡುವನು,
Kannada BSI Bible 2016
ಆದರೆ ಅವರು ನಿಮ್ಮನ್ನು ಒಪ್ಪಿಸುವದಕ್ಕಾಗಿ ತಕ್ಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬದನ್ನು ಮುಂಚಿತವಾಗಿ ಚಿಂತಿಸಬೇಡಿರಿ, ಆಲೋಚಿಸಲೂ ಬೇಡಿರಿ; ಆದರೆ ಆ ಗಳಿಗೆಯಲ್ಲಿ ನಿಮಗೆ ಯಾವದು ಕೊಡಲ್ಪಡುವದೋ ಅದನ್ನೇ ಮಾತನಾಡಿರಿ; ಯಾಕಂ ದರೆ ಮಾತನಾಡುವವರು ನೀವಲ್ಲ, ಆದರೆ ಪರಿಶು
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮನ್ನು ಹಿಡುಕೊಂಡುಹೋಗಿ ಒಪ್ಪಿಸುವಾಗ ಏನು ಹೇಳಬೇಕು ಎಂದು ಮುಂಚಿತವಾಗಿ ಚಿಂತೆಮಾಡಬೇಡಿರಿ; ಆ ಗಳಿಗೆಯಲ್ಲಿ ನಿಮಗೆ ಸೂಚನೆಯಾಗುವಂಥ ಮಾತನ್ನೇ ಆಡಿರಿ; ಮಾತಾಡುವವರು ನೀವಲ್ಲ, ಪವಿತ್ರಾತ್ಮನೇ.
Kannada Bible (KNCL) BSI 2016
ನಿಮ್ಮನ್ನು ಬಂಧಿಸಿ ನ್ಯಾಯವಿಚಾರಣೆಗೆ ಗುರಿಪಡಿಸಿದಾಗ ಏನು ಹೇಳುವುದು ಎಂದು ಮುಂಚಿತವಾಗಿಯೇ ಚಿಂತಾಕ್ರಾಂತರಾಗದಿರಿ. ಆ ಗಳಿಗೆಯಲ್ಲಿ ನಿಮಗೆ ಅನುಗ್ರಹಿಸಲಾಗುವ ಮಾತುಗಳನ್ನೇ ನುಡಿಯಿರಿ. ಏಕೆಂದರೆ, ಮಾತನಾಡುವವರು ನೀವಲ್ಲ, ಪವಿತ್ರಾತ್ಮ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನಿಮ್ಮನ್ನು ಬಂಧಿಸಿ ಒಪ್ಪಿಸುವುದಕ್ಕಾಗಿ ತೆಗೆದುಕೊಂಡು ಹೋಗುವಾಗ ನೀವು ಏನು ಮಾತನಾಡಬೇಕೆಂಬುದನ್ನು ಮುಂಚಿತವಾಗಿಯೇ ಚಿಂತಿಸಬೇಡಿರಿ. ಆ ಗಳಿಗೆಯಲ್ಲಿ ನಿಮ್ಮ ಮನಸ್ಸಿನಲ್ಲಿ ನಿಮಗೆ ಯಾವುದು ಕೊಡಲಾಗುವುದೋ ಅದನ್ನೇ ಮಾತನಾಡಿರಿ. ಏಕೆಂದರೆ ಮಾತನಾಡುವವರು ನೀವಲ್ಲ, ಪವಿತ್ರಾತ್ಮನೇ.