Mark 13:14 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ವಿನಾಶವನ್ನು ಉಂಟುಮಾಡುವ ಭಯಂಕರ ವಸ್ತುವನ್ನು ನೀವು ನೋಡುತ್ತೀರಿ. ಇದು ನಿಂತುಕೊಳ್ಳಬಾರದಂಥ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಿರಿ. (ಇದನ್ನು ಓದುವವನು ಇದರ ಅರ್ಥವನ್ನು ತಿಳಿದುಕೊಳ್ಳಬೇಕು) ಆ ಸಮಯದಲ್ಲಿ ಜುದೇಯದಲ್ಲಿರುವ ಜನರು ಬೆಟ್ಟಗಳಿಗೆ ಓಡಿಹೋಗಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ವಿನಾಶಕಾರಕ ಅಸಹ್ಯ ಮೂರ್ತಿಯು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ನೋಡುವಾಗ (ಇದನ್ನು ಓದುವವನು ತಿಳಿದುಕೊಳ್ಳಲಿ). ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Kannada BSI Bible 2016
ಇದಲ್ಲದೆ ಪ್ರವಾದಿಯಾದ ದಾನಿಯೇಲನು ಹೇಳಿದಂತೆ ಹಾಳುಮಾಡುವ ಅಸಹ್ಯವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದು ವವನು ತಿಳುಕೊಳ್ಳಲಿ) ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಹಾಳುಮಾಡುವ ಅಸಹ್ಯ ವಸ್ತುವು ನಿಲ್ಲಬಾರದ ಸ್ಥಳದಲ್ಲಿ ನಿಂತಿರುವದನ್ನು ನೀವು ಕಾಣುವಾಗ (ಇದನ್ನು ಓದುವವನು ತಿಳುಕೊಳ್ಳಲಿ) ಯೂದಾಯದಲ್ಲಿರುವವರು ಬೆಟ್ಟಗಳಿಗೆ ಓಡಿಹೋಗಲಿ.
Kannada Bible (KNCL) BSI 2016
“ವಿನಾಶಕಾರಿಯಾದ ವಿಕಟಮೂರ್ತಿಯು ಇರಬಾರದ ಸ್ಥಾನದಲ್ಲಿ ಇರುವುದನ್ನು ನೀವು ನೋಡುವಾಗ (ಇದನ್ನು ಓದುವವನು ಅರ್ಥಮಾಡಿಕೊಳ್ಳಲಿ) ಜುದೇಯದಲ್ಲಿರುವ ಜನರು ಬೆಟ್ಟಗುಡ್ಡಗಳಿಗೆ ಓಡಿಹೋಗಲಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ‘ಅಸಹ್ಯ ವಸ್ತು’ ನಿಲ್ಲಬಾರದ ಸ್ಥಳದಲ್ಲಿ ನಿಂತಿರುವುದನ್ನು ನೀವು ಕಾಣುವಾಗ ಓದುವವನು ತಿಳಿದುಕೊಳ್ಳಲಿ. ಆಗ ಯೂದಾಯದಲ್ಲಿ ಇರುವವರು ಬೆಟ್ಟಗಳಿಗೆ ಓಡಿಹೋಗಲಿ.