Mark 13:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನೀವು ಈ ದೊಡ್ಡ ಕಟ್ಟಡಗಳನ್ನು ನೋಡುತ್ತಿರುವಿರಾ? ಇವುಗಳನ್ನೆಲ್ಲ ನಾಶಪಡಿಸಲಾಗುವುದು. ಪ್ರತಿಯೊಂದು ಕಲ್ಲನ್ನೂ ನೆಲಕ್ಕೆ ಕೆಡವಲಾಗುವುದು. ಒಂದು ಕಲ್ಲಿನ ಮೇಲೆ ಮತ್ತೊಂದು ಕಲ್ಲು ಉಳಿಯುವುದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯಲ್ಲವೇ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲ್ಪಡುವುದು” ಎಂದನು.
Kannada BSI Bible 2016
ಯೇಸು ಅವನಿಗೆ ಪ್ರತ್ಯುತ್ತರವಾಗಿ-- ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಕೆಳಗೆ ಕೆಡವಲ್ಪಡದೆ ಒಂದರ ಮೇಲೊಂದು ಕಲ್ಲು ಇಲ್ಲಿ ಬಿಡಲ್ಪಡುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ಈ ದೊಡ್ಡ ಕಟ್ಟಣಗಳನ್ನು ನೋಡುತ್ತೀಯಾ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ; ಎಲ್ಲಾ ಕೆಡವಲ್ಪಡುವದು ಅಂದನು.
Kannada Bible (KNCL) BSI 2016
ಅದಕ್ಕೆ ಯೇಸು, “ಈ ಮಹಾಕಟ್ಟಡಗಳನ್ನು ನೀನು ನೋಡುತ್ತಿರುವೆಯಲ್ಲವೆ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವನ್ನೂ ಕೆಡವಿಹಾಕುವರು,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವನಿಗೆ ಉತ್ತರವಾಗಿ, “ನೀನು ಈ ದೊಡ್ಡ ಕಟ್ಟಡಗಳನ್ನು ನೋಡುತ್ತೀಯೋ? ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವುದಿಲ್ಲ; ಎಲ್ಲವೂ ಕೆಡವಲಾಗುವವು,” ಎಂದರು.