Mark 13:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂತೆಯೇ ನಾನು ನಿಮಗೆ ಹೇಳಿದ ಈ ಸಂಗತಿಗಳು ನೆರವೇರುವುದನ್ನು ನೀವು ನೋಡುವಾಗ, ಸಮಯವು ಹತ್ತಿರವಾಗಿದೆಯೆಂದೂ ಬರಲು ಸಿದ್ಧವಾಗಿದೆಯೆಂದೂ ತಿಳಿದುಕೊಳ್ಳಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
Kannada BSI Bible 2016
ಅದೇ ಪ್ರಕಾರ ಇವುಗಳು ಆಗುವದನ್ನು ನೀವು ನೋಡುವಾಗ ಅದು ಹತ್ತಿರದಲ್ಲಿ ಅಂದರೆ ಬಾಗಲುಗಳಲ್ಲಿಯೇ ಅದೆ ಎಂದು ತಿಳುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಗೆಯೇ ನೀವು ಸಹ ಇದೆಲ್ಲಾ ಆಗುವದನ್ನು ನೋಡುವಾಗ ಹತ್ತಿರವದೆ, ಬಾಗಿಲಲ್ಲೇ ಅದೆ ಎಂದು ತಿಳುಕೊಳ್ಳಿರಿ.
Kannada Bible (KNCL) BSI 2016
ಅಂತೆಯೇ ಇವೆಲ್ಲವೂ ಸಂಭವಿಸುವುದನ್ನು ನೋಡುವಾಗ ನರಪುತ್ರನು ಸಮೀಪಿಸಿದ್ದಾನೆ, ಹೊಸ್ತಿಲಲ್ಲೇ ಇದ್ದಾನೆಂದು ತಿಳಿದುಕೊಳ್ಳಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪ್ರಕಾರ ಇವೆಲ್ಲವೂ ಸಂಭವಿಸುವುದನ್ನು ನೀವು ಕಾಣುವಾಗ, ಮನುಷ್ಯಪುತ್ರನಾದ ನಾನು ಬಾಗಿಲ ಹತ್ತಿರದಲ್ಲಿಯೇ ಇದ್ದೇನೆ ಎಂದು ತಿಳಿದುಕೊಳ್ಳಿರಿ.