Mark 13:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಯೇಸು ಆಲಿವ್ ಮರಗಳ ಗುಡ್ಡದ ಮೇಲೆ, ಪೇತ್ರ, ಯಾಕೋಬ, ಯೋಹಾನ ಮತ್ತು ಅಂದ್ರೆಯರ ಸಂಗಡ ಕುಳಿತಿದ್ದನು. ಅವರೆಲ್ಲರಿಗೂ ಅಲ್ಲಿಂದ ದೇವಾಲಯ ಕಾಣುತಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಳಿಕ ಆತನು ಎಣ್ಣೆ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ ಹಾಗೂ ಅಂದ್ರೆಯ,
Kannada BSI Bible 2016
ಆತನು ಎಣ್ಣೇ ಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತುಕೊಂಡಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು ಪ್ರತ್ಯೇಕ ವಾಗಿ ಆತನಿಗೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಬಳಿಕ ಆತನು ಎಣ್ಣೇಮರಗಳ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕೂತಿದ್ದಾಗ ಪೇತ್ರ ಯಾಕೋಬ ಯೋಹಾನ ಅಂದ್ರೆಯ ಇವರು -
Kannada Bible (KNCL) BSI 2016
ಯೇಸುಸ್ವಾಮಿ ದೇವಾಲಯಕ್ಕೆ ಎದುರಾಗಿ ಓಲಿವ್ ಗುಡ್ಡದ ಮೇಲೆ ಕುಳಿತಿದ್ದಾಗ ಪೇತ್ರ, ಯಕೋಬ, ಯೊವಾನ್ನ ಹಾಗೂ ಅಂದ್ರೆಯ ಪ್ರತ್ಯೇಕವಾಗಿ ಅವರ ಬಳಿಗೆ ಬಂದು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಓಲಿವ್ ಗುಡ್ಡದ ಮೇಲೆ ದೇವಾಲಯಕ್ಕೆ ಎದುರಾಗಿ ಕುಳಿತುಕೊಂಡಿದ್ದಾಗ ಪೇತ್ರ, ಯಾಕೋಬ, ಯೋಹಾನ, ಅಂದ್ರೆಯ ಇವರು ಪ್ರತ್ಯೇಕವಾಗಿ ಯೇಸುವಿಗೆ,