Mark 13:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ದಿನವಾಗಲಿ ಸಮಯವಾಗಲಿ ಯಾವಾಗ ಬರುತ್ತದೆಂಬುದು ಪರಲೋಕದಲ್ಲಿರುವ ಮಗನಿಗಾಗಲಿ ದೇವದೂತರಿಗಾಗಲಿ ತಿಳಿದಿಲ್ಲ. ತಂದೆಗೆ ಮಾತ್ರ ತಿಳಿದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದಲ್ಲದೆ ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ನನ್ನ ತಂದೆಗೆ ಹೊರತು ಮತ್ತಾರಿಗೂ ತಿಳಿಯದು, ಪರಲೋಕದಲ್ಲಿರುವ ದೂತರಿಗಾಗಲಿ, ಮಗನಿಗಾಗಲಿ ತಿಳಿಯದು.
Kannada BSI Bible 2016
ಆದರೆ ಆ ದಿನದ ಮತ್ತು ಆ ಗಳಿಗೆಯ ವಿಷಯ ವಾಗಿ ತಂದೆಗೇ ಹೊರತು ಯಾವ ಮನುಷ್ಯನಿಗೂ ಪರಲೋಕದಲ್ಲಿರುವ ದೂತರಿಗೂ ಮಗನಿಗೂ ತಿಳಿ ಯದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆ ದಿನದ ವಿಷಯವಾಗಲಿ ಆ ಗಳಿಗೆಯ ವಿಷಯವಾಗಲಿ ನನ್ನ ತಂದೆಗೆ ತಿಳಿಯುವದೇ ಹೊರತು ಮತ್ತಾರಿಗೂ ತಿಳಿಯದು; ಪರಲೋಕದಲ್ಲಿರುವ ದೂತರಿಗೂ ತಿಳಿಯದು; ಮಗನಿಗೂ ತಿಳಿಯದು.
Kannada Bible (KNCL) BSI 2016
“ಆ ದಿನವಾಗಲಿ, ಆ ಗಳಿಗೆಯಾಗಲಿ, ಯಾವಾಗ ಬರುವುದೆಂದು ಪಿತನ ಹೊರತು ಮತ್ತಾರೂ ಅರಿಯರು. ಸ್ವರ್ಗದಲ್ಲಿರುವ ದೂತರೇ ಆಗಲಿ, ಪುತ್ರನೇ ಆಗಲಿ, ಅದನ್ನು ಅರಿಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆ ದಿನದ ಮತ್ತು ಆ ಗಳಿಗೆಯ ವಿಷಯವಾಗಿ ತಂದೆಗೆ ಹೊರತು ಯಾವ ಮನುಷ್ಯನಿಗಾಗಲಿ, ಪರಲೋಕದಲ್ಲಿರುವ ದೂತರಿಗಾಗಲಿ, ಪುತ್ರನಿಗಾಗಲಿ ತಿಳಿಯದು.