Mark 13:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ತನ್ನ ಮನೆಯನ್ನು ಬಿಟ್ಟು ಪ್ರವಾಸಕ್ಕಾಗಿ ಹೋದ ಮನುಷ್ಯನಿಗೆ ಇದು ಹೋಲಿಕೆಯಾಗಿದೆ. ಅವನು ತನ್ನ ಮನೆಯನ್ನು ನೋಡಿಕೊಳ್ಳುವುದಕ್ಕಾಗಿ ಸೇವಕರಿಗೆ ಒಪ್ಪಿಸಿಕೊಟ್ಟನು. ಅವನು ಪ್ರತಿಯೊಬ್ಬ ಸೇವಕನಿಗೂ ಒಂದೊಂದು ವಿಶೇಷ ಕೆಲಸವನ್ನು ಕೊಟ್ಟು ದ್ವಾರಪಾಲಕನಿಗೆ, ‘ನೀನು ಯಾವಾಗಲೂ ಸಿದ್ಧವಾಗಿರು’ ಎಂದು ಹೇಳಿದನು. ಅಂತೆಯೇ ನಾನೂ ನಿಮಗೆ ಹೇಳುವುದೇನೆಂದರೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದು ಒಬ್ಬ ಮನುಷ್ಯನು ತನ್ನ ಮನೆಯನ್ನು ಬಿಟ್ಟು ದೂರಪ್ರಯಾಣಕ್ಕೆ ಹೋಗುವಾಗ ತನ್ನ ಸೇವಕರಿಗೆ ಮನೇ ಅಧಿಕಾರವನ್ನು ಒಪ್ಪಿಸಿಕೊಟ್ಟು ಪ್ರತಿಯೊಬ್ಬನಿಗೆ ಅವನವನ ಕೆಲಸಗಳನ್ನು ಕೊಟ್ಟು ಬಾಗಿಲು ಕಾಯುವವನಿಗೆ, ನೀನು ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ” ಎಂದು ನಾನು ನಿಮಗೆ ಹೇಳುತ್ತಿದ್ದೇನೆ.
Kannada BSI Bible 2016
ಮನುಷ್ಯಕುಮಾರನು ದೂರದ ಪ್ರಯಾಣವನ್ನು ಕೈಕೊಂಡು ತನ್ನ ಮನೆಯನ್ನು ಬಿಟ್ಟು ತನ್ನ ಸೇವಕರಿಗೆ ಅಧಿಕಾರವನ್ನು ಮತ್ತು ಪ್ರತಿಯೊ ಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಲು ಕಾಯು ವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬ ಮನುಷ್ಯಸು ತನ್ನ ಮನೆಯನ್ನು ಬಿಟ್ಟು ಬೇರೊಂದು ದೇಶಕ್ಕೆ ಹೋಗುವಾಗ ತನ್ನ ಆಳುಗಳಿಗೆ ಮನೇ ಆಡಳಿತವನ್ನು ಒಪ್ಪಿಸಿಕೊಟ್ಟು ಒಬ್ಬೊಬ್ಬನಿಗೆ ಅವನವನ ಕೆಲಸವನ್ನು ನೇವಿುಸಿ ಬಾಗಿಲುಕಾಯುವವನನ್ನು ಕರೆದು - ನೀನು ಎಚ್ಚರವಾಗಿರಬೇಕೆಂದು ಅಪ್ಪಣೆ ಕೊಡುವ ಪ್ರಕಾರ [ನಾನು ನಿಮಗೆ ಅಪ್ಪಣೆ ಕೊಡುತ್ತೇನೆ].
Kannada Bible (KNCL) BSI 2016
ಪ್ರವಾಸಕ್ಕೆಂದು ಯಜಮಾನನೊಬ್ಬನು ಮನೆಬಿಟ್ಟು ಹೋಗುವಾಗ ತನ್ನ ಸೇವಕರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಜವಾಬ್ದಾರಿಕೆಯನ್ನು ವಹಿಸಿ, ದ್ವಾರಪಾಲಕನಿಗೆ ‘ನೀನು ಎಚ್ಚರವಾಗಿರಬೇಕು,’ ಎಂದು ಅಪ್ಪಣೆಕೊಡುವ ರೀತಿಯಲ್ಲಿ ನಾನು ನಿಮಗೆ ಹೇಳುತ್ತಿದ್ದೇನೆ. ಎಚ್ಚರವಾಗಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದು ಒಬ್ಬ ಮನುಷ್ಯನು ದೂರ ಪ್ರಯಾಣಕ್ಕಾಗಿ ತನ್ನ ಮನೆಯನ್ನು ಬಿಟ್ಟು, ತನ್ನ ಸೇವಕರಿಗೆ ಅಧಿಕಾರವನ್ನೂ ಪ್ರತಿಯೊಬ್ಬನಿಗೆ ಅವನವನ ಕೆಲಸವನ್ನು ಕೊಟ್ಟು ಬಾಗಿಲು ಕಾಯುವವನಿಗೆ ಜಾಗರೂಕನಾಗಿರಬೇಕೆಂದು ಆಜ್ಞಾಪಿಸಿದವನ ಹಾಗೆ ಇರುತ್ತದೆ ಎಂದು ನಾನು ನಿಮಗೆ ಹೇಳುತ್ತಿದ್ದೇನೆ.