Mark 13:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಮೀಪದಲ್ಲಿ ನಡೆಯುತ್ತಿರುವ ಯುದ್ಧಗಳ ಶಬ್ಧವನ್ನೂ ಬಹುದೂರದಲ್ಲಿ ನಡೆಯುತ್ತಿರುವ ಯುದ್ಧಗಳ ಬಗ್ಗೆ ಸುದ್ದಿಯನ್ನೂ ನೀವು ಕೇಳುವಿರಿ. ಆದರೆ ಭಯಪಡಬೇಡಿ. ಅಂತ್ಯಕಾಲ ಬರುವುದಕ್ಕಿಂತ ಮುಂಚೆ ಈ ಸಂಗತಿಗಳು ನಡೆಯಲೇಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಯುದ್ಧಗಳಾಗುವುದನ್ನೂ, ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವುದು ಅಗತ್ಯ. ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Kannada BSI Bible 2016
ಇದಲ್ಲದೆ ಯುದ್ಧಗಳ ವಿಷಯವಾಗಿಯೂ ಯುದ್ಧಗಳ ಸುದ್ಧಿಯ ವಿಷಯವಾಗಿಯೂ ನೀವು ಕೇಳುವಾಗ ಕಳವಳಪಡ ಬೇಡಿರಿ; ಯಾಕಂದರೆ ಅವುಗಳು ಆಗುವದು ಅಗತ್ಯ; ಆದರೆ ಇನ್ನೂ ಅದು ಅಂತ್ಯವಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಯುದ್ಧಗಳಾಗುವದನ್ನೂ ಯುದ್ಧವಾಗುವ ಹಾಗಿದೆ ಎಂಬ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಹಾಗಾಗುವದು ಅಗತ್ಯ; ಆದರೂ ಇದು ಇನ್ನೂ ಅಂತ್ಯಕಾಲವಲ್ಲ.
Kannada Bible (KNCL) BSI 2016
ಇದಲ್ಲದೆ, ರಣಕಹಳೆಗಳನ್ನೂ ಸಮರಸುದ್ದಿಗಳನ್ನೂ ಕೇಳುವಿರಿ. ಆಗ ನೀವು ಕಳವಳಪಡಬೇಡಿ. ಇವೆಲ್ಲವೂ ಸಂಭವಿಸಲೇಬೇಕು. ಆದರೂ ಇದಿನ್ನೂ ಅಂತ್ಯಕಾಲವಲ್ಲ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಯುದ್ಧಗಳನ್ನೂ, ಯುದ್ಧಗಳ ಸುದ್ದಿಗಳನ್ನೂ ನೀವು ಕೇಳುವಾಗ ಕಳವಳಪಡಬೇಡಿರಿ. ಏಕೆಂದರೆ ಇವೆಲ್ಲವು ಸಂಭವಿಸುವುದು ಅಗತ್ಯ. ಆದರೆ ಇದು ಇನ್ನೂ ಅಂತ್ಯವಲ್ಲ.