Mark 13:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನಾಂಗಗಳು ಇತರ ಜನಾಂಗಗಳ ವಿರುದ್ಧ ಹೋರಾಡುತ್ತವೆ. ರಾಜ್ಯಗಳು ಇತರ ರಾಜ್ಯಗಳ ವಿರುದ್ಧ ಹೋರಾಡುತ್ತವೆ. ಜನರಿಗೆ ತಿನ್ನಲು ಏನೂ ಆಹಾರವಿಲ್ಲದಂಥ ಕಾಲ ಬರುತ್ತದೆ. ಅನೇಕ ಸ್ಥಳಗಳಲ್ಲಿ ಭೂಕಂಪಗಳಾಗುತ್ತವೆ. ಈ ಸಂಗತಿಗಳು ಪ್ರಸವವೇದನೆಯಂತಿರುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ, ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳೂ, ಬರಗಾಲಗಳೂ, ಉಂಟಾಗುವವು. ಆದರೆ ಇವೆಲ್ಲಾ ಪ್ರಸವ ವೇದನೆಯ ಪ್ರಾರಂಭ ಮಾತ್ರ.
Kannada BSI Bible 2016
ಯಾಕಂದರೆ ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಇದಲ್ಲದೆ ಬರ ಗಾಲಗಳು ಕಳವಳಗಳು ಉಂಟಾಗುವವು; ಇವು ಸಂಕಟಗಳ ಪ್ರಾರಂಭವಾಗಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಭೂಕಂಪಗಳು ಅಲ್ಲಲ್ಲಿ ಆಗುವವು; ಬರಗಳು ಬರುವವು; ಇವೆಲ್ಲಾ [ನೂತನ ಕಾಲವು ಹುಟ್ಟುವ] ಪ್ರಸವವೇದನೆಯ ಪ್ರಾರಂಭ.
Kannada Bible (KNCL) BSI 2016
ಜನಾಂಗಕ್ಕೆ ವಿರುದ್ಧ ಜನಾಂಗ, ರಾಷ್ಟ್ರಕ್ಕೆ ವಿರುದ್ಧ ರಾಷ್ಟ್ರ ಯುದ್ಧಕ್ಕೆ ಇಳಿಯುವುವು. ಅಲ್ಲಲ್ಲಿ ಭೂಕಂಪಗಳು ಆಗುವುವು. ಕ್ಷಾಮ-ಡಾಮರಗಳು ತಲೆದೋರುವುವು. ಇವೆಲ್ಲವೂ ಪ್ರಸವವೇದನೆಯ ಪ್ರಾರಂಭ ಮಾತ್ರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜನಾಂಗಕ್ಕೆ ವಿರೋಧವಾಗಿ ಜನಾಂಗವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು. ನಾನಾ ಕಡೆಗಳಲ್ಲಿ ಭೂಕಂಪಗಳಾಗುವವು. ಬರಗಾಲಗಳು ಉಂಟಾಗುವವು, ಇವು ಪ್ರಸವವೇದನೆಯ ಪ್ರಾರಂಭ ಮಾತ್ರ.