Mark 13:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಎಚ್ಚರಿಕೆಯಿಂದಿರಿ! ನೀವು ನನ್ನನ್ನು ಹಿಂಬಾಲಿಸುವುದರಿಂದ ಜನರು ನಿಮ್ಮನ್ನು ಬಂಧಿಸಿ, ನ್ಯಾಯವಿಚಾರಣೆಗೆ ಕೊಂಡೊಯ್ಯುವರು. ತಮ್ಮ ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ರಾಜರ ಮತ್ತು ಅಧಿಪತಿಗಳ ಮುಂದೆ ನಿಮ್ಮನ್ನು ನಿಲ್ಲಿಸಿ ನನ್ನ ವಿಷಯದಲ್ಲಿ ಸಾಕ್ಷಿಕೊಡಲು ನಿಮ್ಮನ್ನು ಬಲವಂತಪಡಿಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳೆದುಕೊಂಡು ಹೋಗುವರು. ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು, ನನ್ನ ನಿಮಿತ್ತವಾಗಿ ನಿಮ್ಮನ್ನು ಅಧಿಕಾರಿಗಳ ಮತ್ತು ಅರಸುಗಳ ಮುಂದೆ ಅವರಿಗೆ ಸಾಕ್ಷಿಗಳಾಗಿ ನಿಲ್ಲಿಸುವರು,
Kannada BSI Bible 2016
ಆದರೆ ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆ ತೆಗೆದುಕೊಳ್ಳಿರಿ; ಯಾಕಂದರೆ ಅವರು ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಒಪ್ಪಿಸುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ಅವರಿಗೆ ವಿರೋಧವಾಗಿ ನನ್ನ ನಿಮಿತ್ತ ಅಧಿಕಾರಿಗಳ ಮತ್ತು ಅರಸುಗಳ ಮುಂದೆ ನೀವು ತರಲ್ಪಡುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಿಮ್ಮ ವಿಷಯದಲ್ಲಿ ನೋಡಿಕೊಳ್ಳಿರಿ. ನಿಮ್ಮನ್ನು ನ್ಯಾಯವಿಚಾರಣೆಯ ಸಭೆಗಳಿಗೆ ಎಳಕೊಂಡುಹೋಗುವರು; ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು; ನನ್ನ ನಿವಿುತ್ತವಾಗಿ ನಿಮ್ಮನ್ನು ಅಧಿಪತಿಗಳ ಮುಂದೆಯೂ ಅರಸುಗಳ ಮುಂದೆಯೂ ಸಾಕ್ಷಿಗಳಾಗಿ ನಿಲ್ಲಿಸುವರು. ಹೀಗೆ ಅವರಿಗೆ ಸಾಕ್ಷಿಯಾಗುವದು.
Kannada Bible (KNCL) BSI 2016
“ನಿಮ್ಮ ವಿಷಯದಲ್ಲೂ ಎಚ್ಚರಿಕೆಯಿಂದಿರಿ. ನಿಮ್ಮನ್ನು ನ್ಯಾಯಸ್ಥಾನಗಳಿಗೆ ಎಳೆಯುವರು; ಪ್ರಾರ್ಥನಾಮಂದಿರಗಳಲ್ಲಿ ಹೊಡೆಯುವರು. ನನ್ನ ನಿಮಿತ್ತ ನೀವು ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಬೇಕಾಗುವುದು. ಅವರ ಮುಂದೆ ನೀವು ನನಗೆ ಸಾಕ್ಷಿಗಳಾಗುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀವು ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಜನರು ನಿಮ್ಮನ್ನು ನ್ಯಾಯಸ್ಥಾನಗಳಿಗೆ ಒಪ್ಪಿಸುವರು, ಸಭಾಮಂದಿರಗಳಲ್ಲಿ ನಿಮ್ಮನ್ನು ಹೊಡೆಯುವರು. ನನ್ನ ನಿಮಿತ್ತವಾಗಿ ಅಧಿಕಾರಿಗಳ ಮತ್ತು ಅರಸರ ಮುಂದೆ ನಿಲ್ಲಿಸುವರು. ಹೀಗೆ ಇದು ಅವರಿಗೆ ಸಾಕ್ಷಿಯಾಗಿರುವುದು.