Mark 14:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪಸ್ಕ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬಕ್ಕೆ ಕೇವಲ ಎರಡು ದಿನಗಳಿದ್ದವು. ಮಹಾಯಾಜಕರು ಹಾಗೂ ಧರ್ಮೋಪದೇಶಕರು ಯಾವುದಾದರೊಂದು ಸುಳ್ಳು ಅಪವಾದವನ್ನು ಕಂಡುಹಿಡಿದು ಯೇಸುವನ್ನು ಬಂಧಿಸಿ ಆತನನ್ನು ಕೊಲ್ಲಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
Kannada BSI Bible 2016
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿವಸ ಗಳಿದ್ದಾಗ ಪ್ರಧಾನಯಾಜಕರೂ ಶಾಸ್ತ್ರಿಗಳೂ ಉಪಾಯ ದಿಂದ ಆತನನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಹವಣಿಸುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮಹಾಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.
Kannada Bible (KNCL) BSI 2016
ಪಾಸ್ಕಹಬ್ಬವು, ಅಂದರೆ ಹುಳಿರಹಿತ ರೊಟ್ಟಿಯ ಹಬ್ಬವು ಬರುವುದಕ್ಕೆ ಇನ್ನು ಎರಡು ದಿನಗಳು ಮಾತ್ರ ಇದ್ದವು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಉಪಾಯದಿಂದ ಹಿಡಿದು ಕೊಲ್ಲಿಸುವುದಕ್ಕೆ ಹವಣಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಸ್ಕದ ಮತ್ತು ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿವಸಗಳಿದ್ದಾಗ, ಮುಖ್ಯಯಾಜಕರೂ ನಿಯಮ ಬೋಧಕರೂ ಉಪಾಯದಿಂದ ಯೇಸುವನ್ನು ಹೇಗೆ ಹಿಡಿದು ಕೊಲ್ಲಬೇಕೆಂದು ಮಾರ್ಗ ಹುಡುಕುತ್ತಿದ್ದರು.