Mark 14:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಂತರ ಹನ್ನೆರಡು ಮಂದಿ ಅಪೊಸ್ತಲರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಹಿಡಿದುಕೊಡಬೇಕೆಂಬ ದುರುದ್ದೇಶದಿಂದ ಮಹಾಯಾಜಕರೊಡನೆ ಮಾತಾಡಲು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.
Kannada BSI Bible 2016
ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮಹಾಯಾಜಕರಿಗೆ ಹಿಡುಕೊಡಬೇಕೆಂತ ಅವರ ಬಳಿಗೆ ಹೋದನು.
Kannada Bible (KNCL) BSI 2016
ಇದಾದಮೇಲೆ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತಿನ ಯೂದನು ಯೇಸುಸ್ವಾಮಿಯನ್ನು ಹಿಡಿದುಕೊಡುವ ದುರುದ್ದೇಶದಿಂದ ಮುಖ್ಯಯಾಜಕರ ಬಳಿಗೆ ಹೋದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.