Mark 14:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮಹಾಯಾಜಕರು ಇದರ ಬಗ್ಗೆ ಬಹಳ ಸಂತೋಷಗೊಂಡು, ಹಣಕೊಡುವುದಾಗಿ ಯೂದನಿಗೆ ಮಾತುಕೊಟ್ಟರು. ಆದ್ದರಿಂದ ಅವರಿಗೆ ಯೇಸುವನ್ನು ಹಿಡಿದುಕೊಡಲು ಅತ್ಯಂತ ಉತ್ತಮವಾದ ಸಮಯಕ್ಕಾಗಿ ಯೂದನು ಕಾಯತ್ತಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.
Kannada BSI Bible 2016
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಕೇಳಿ ಸಂತೋಷಪಟ್ಟು - ನಿನಗೆ ಹಣಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆ ಎಂದು ನೋಡುತ್ತಿದ್ದನು.
Kannada Bible (KNCL) BSI 2016
ಇದರಿಂದ ಆ ಯಾಜಕರಿಗೆ ಅತ್ಯಾನಂದವಾಯಿತು. ಅವನಿಗೆ ಹಣಕೊಡುವುದಾಗಿ ಅವರು ಮಾತುಕೊಟ್ಟರು. ಯೇಸುವನ್ನು ಹಿಡಿದೊಪ್ಪಿಸಲು ಅವನು ಸಂದರ್ಭ ಕಾಯತೊಡಗಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುವುದಾಗಿ ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಸಂದರ್ಭ ಹುಡುಕುತ್ತಿದ್ದನು.