Mark 14:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನವಾಗಿತ್ತು. ಯೆಹೂದಿಗಳು ಯಾವಾಗಲೂ ಪಸ್ಕಹಬ್ಬದ ಕುರಿಮರಿಗಳನ್ನು ಯಜ್ಞಮಾಡುವ ಸಮಯ ಇದಾಗಿತ್ತು. ಯೇಸುವಿನ ಶಿಷ್ಯರು ಆತನ ಬಳಿಗೆ ಬಂದು, “ನಾವು ಪಸ್ಕಹಬ್ಬದ ಊಟವನ್ನು ನಿನಗಾಗಿ ಎಲ್ಲಿ ಸಿದ್ಧಪಡಿಸೋಣ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.
Kannada BSI Bible 2016
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ ಪಸ್ಕದ ಕುರಿಯನ್ನು ಅವರು ಕೊಯ್ದಾಗ ಆತನ ಶಿಷ್ಯರು ಆತನಿಗೆ--ನೀನು ಪಸ್ಕದ ಊಟಮಾಡು ವಂತೆ ನಾವು ಎಲ್ಲಿಗೆ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿವಸ, ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿವಸ, ಆತನ ಶಿಷ್ಯರು - ನೀನು ಪಸ್ಕದ ಊಟ ಮಾಡುವಂತೆ ನಾವು ಎಲ್ಲಿ ಹೋಗಿ ಸಿದ್ಧಮಾಡಬೇಕನ್ನುತ್ತೀ ಎಂದು ಆತನನ್ನು ಕೇಳಲು
Kannada Bible (KNCL) BSI 2016
ಅಂದು ಹುಳಿರಹಿತ ರೊಟ್ಟಿಯ ಹಬ್ಬದ ಮೊದಲನೆಯ ದಿನ. ಅಂದರೆ, ಪಾಸ್ಕಹಬ್ಬದ ಕುರಿಮರಿಯನ್ನು ಕೊಯ್ಯುವ ದಿನ. ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದು, “ತಮಗೆ ಪಾಸ್ಕಭೋಜನವನ್ನು ನಾವು ಎಲ್ಲಿ ಸಿದ್ಧಪಡಿಸಬೇಕೆನ್ನುತ್ತೀರಿ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.