Mark 14:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಶಿಷ್ಯರು ಅಲ್ಲಿಂದ ಹೊರಟು, ಪಟ್ಟಣದೊಳಗೆ ಹೋದರು. ಯೇಸು ಹೇಳಿದ ರೀತಿಯಲ್ಲಿಯೇ ಪ್ರತಿಯೊಂದೂ ನಡೆಯಿತು. ಶಿಷ್ಯರು ಪಸ್ಕಹಬ್ಬದ ಊಟವನ್ನು ಸಿದ್ಧಪಡಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.
Kannada BSI Bible 2016
ಆಗ ಆತನ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಆತನು ತಮಗೆ ಹೇಳಿದಂತೆ ಕಂಡುಕೊಂಡು ಪಸ್ಕವನ್ನು ಸಿದ್ಧಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಶಿಷ್ಯರು ಹೊರಟು ಪಟ್ಟಣಕ್ಕೆ ಹೋಗಿ ಆತನು ತಮಗೆ ಹೇಳಿದಂತೆ ಕಂಡು ಪಸ್ಕಕ್ಕೆ ಸೌರಿಸಿದರು.
Kannada Bible (KNCL) BSI 2016
ಅವರು ಪಟ್ಟಣಕ್ಕೆ ಹೋಗಿ, ಯೇಸು ತಮಗೆ ಹೇಳಿದ ಪ್ರಕಾರ ಎಲ್ಲಾ ವ್ಯವಸ್ಥಿತವಾಗಿರುವುದನ್ನು ಕಂಡು, ಪಾಸ್ಕಭೋಜನವನ್ನು ತಯಾರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಶಿಷ್ಯರು ಹೊರಟುಹೋಗಿ ಪಟ್ಟಣದೊಳಕ್ಕೆ ಬಂದು ಯೇಸು ತಮಗೆ ಹೇಳಿದಂತೆಯೇ ಕಂಡು ಪಸ್ಕವನ್ನು ಸಿದ್ಧಮಾಡಿದರು.