Mark 14:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮನುಷ್ಯಕುಮಾರನು ಹಿಂಸಿಸಲ್ಪಟ್ಟನು. ಪವಿತ್ರ ಗ್ರಂಥದಲ್ಲಿಯೂ ಅದನ್ನು ಬರೆಯಲಾಗಿದೆ. ಆದರೆ ಮನುಷ್ಯಕುಮಾರನನ್ನು ಕೊಲ್ಲಲು ಹಿಡಿದುಕೊಡುವ ವ್ಯಕ್ತಿಯ ಸ್ಥಿತಿ ಬಹಳ ಭೀಕರವಾಗಿರುತ್ತದೆ. ಅವನು ಹುಟ್ಟದೇ ಇದ್ದಿದ್ದರೆ ಅವನಿಗೆ ಒಳ್ಳೆಯದಾಗುತ್ತಿತ್ತು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ, ಆದರೆ ಯಾರು ಮನುಷ್ಯಕುಮಾರನನ್ನು ಹಿಡಿದುಕೊಡುವನೋ ಅವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗಿತ್ತು” ಅಂದನು.
Kannada BSI Bible 2016
ತನ್ನ ವಿಷಯವಾಗಿ ಬರೆದಿರುವ ಪ್ರಕಾರ ಮನುಷ್ಯ ಕುಮಾರನು ನಿಜವಾಗಿಯೂ ಹೋಗುತ್ತಾನೆ; ಆದರೆ ಯಾವನಿಂದ ಮನುಷ್ಯಕುಮಾರನು ಹಿಡುಕೊಡಲ್ಪಡು ತ್ತಾನೋ ಆ ಮನುಷ್ಯನಿಗೆ ಅಯ್ಯೋ! ಆ ಮನುಷ್ಯನು ಹುಟ್ಟದೆಹೋಗಿದ್ದರೆ ಅವನಿಗೆ ಒಳ್ಳೇದಾಗುತ್ತಿತ್ತು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನುಷ್ಯಕುಮಾರನು ಹೊರಟುಹೋಗುತ್ತಾನೆ ಸರಿ; ಹಾಗೆ ಆತನ ವಿಷಯವಾಗಿ ಬರೆದದೆಯಲ್ಲಾ. ಆದರೆ ಯಾವನು ಮನುಷ್ಯಕುಮಾರನನ್ನು ಹಿಡುಕೊಡುವನೋ ಅವನ ಗತಿಯನ್ನು ಏನು ಹೇಳಲಿ. ಆ ಮನುಷ್ಯನು ಹುಟ್ಟದಿದ್ದರೆ ಅವನಿಗೆ ಒಳ್ಳೇದಾಗಿತ್ತು ಎಂದು ಹೇಳಿದನು.
Kannada Bible (KNCL) BSI 2016
ನರಪುತ್ರನೇನೋ ಪವಿತ್ರಗ್ರಂಥದಲ್ಲಿ ಬರೆದಿರುವಂತೆ ಹೊರಟುಹೋಗುತ್ತಾನೆ, ನಿಜ. ಆದರೆ ನರಪುತ್ರನಿಗೆ ದ್ರೋಹ ಬಗೆಯುವವನ ದುರ್ಗತಿಯನ್ನು ಏನೆಂದು ಹೇಳಲಿ? ಅವನು ಹುಟ್ಟದಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು!” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೇ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದು ಹೇಳಿದರು.