Mark 14:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಊಟಮಾಡುತ್ತಿರುವಾಗ, ಯೇಸು ರೊಟ್ಟಿಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ಮುರಿದು, ತನ್ನ ಶಿಷ್ಯರಿಗೆ ಕೊಟ್ಟನು. ಯೇಸು ಅವರಿಗೆ, “ಈ ರೊಟ್ಟಿಯನ್ನು ತೆಗೆದುಕೊಂಡು ತಿನ್ನಿರಿ. ಈ ರೊಟ್ಟಿಯು ನನ್ನ ದೇಹ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.
Kannada BSI Bible 2016
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಆಶೀರ್ವದಿಸಿ ಮುರಿದು ಅವರಿಗೆ ಕೊಟ್ಟು--ತಕ್ಕೊಳ್ಳಿರಿ, ತಿನ್ನಿರಿ; ಇದು ನನ್ನ ದೇಹ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಊಟಮಾಡುತ್ತಿರುವಾಗ ಆತನು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ತಕ್ಕೊಳ್ಳಿರಿ; ಇದು ನನ್ನ ದೇಹ ಅಂದನು.
Kannada Bible (KNCL) BSI 2016
ಅವರೆಲ್ಲರೂ ಊಟಮಾಡುತ್ತಿರುವಾಗ, ಯೇಸುಸ್ವಾಮಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತುತಿಮಾಡಿ, ಅದನ್ನು ಮುರಿದು, ಶಿಷ್ಯರಿಗೆ ಕೊಡುತ್ತಾ, “ಇದನ್ನು ಸ್ವೀಕರಿಸಿರಿ, ಇದು ನನ್ನ ಶರೀರ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ಅದನ್ನು ಆಶೀರ್ವದಿಸಿ, ಮುರಿದು, ಅವರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ಇದು ನನ್ನ ದೇಹ,” ಎಂದರು.