Mark 14:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, ಅದಕ್ಕಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಅದನ್ನು ತನ್ನ ಶಿಷ್ಯರಿಗೆ ಕೊಟ್ಟನು. ಶಿಷ್ಯರೆಲ್ಲರೂ ಅದರಲ್ಲಿ ಕುಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತರುವಾಯ ಪಾನಪಾತ್ರೆಯನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತಾಸುತ್ತಿ ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟನು. ಅವರೆಲ್ಲರೂ ಅದರಿಂದ ಕುಡಿದರು.
Kannada BSI Bible 2016
ತರುವಾಯ ಆತನು ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಪಾತ್ರೆಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಅವರಿಗೆ ಕೊಟ್ಟನು; ಅವರೆಲ್ಲರೂ ಅದರಲ್ಲಿ ಕುಡಿದರು.
Kannada Bible (KNCL) BSI 2016
ಬಳಿಕ ಪಾನಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ, ಅದನ್ನು ಅವರಿಗೆ ಕೊಟ್ಟರು. ಅವರೆಲ್ಲರೂ ಅದರಿಂದ ಕುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತರುವಾಯ ಯೇಸು ಪಾತ್ರೆಯನ್ನು ತೆಗೆದುಕೊಂಡು ಕೃತಜ್ಞತಾಸ್ತುತಿ ಮಾಡಿ ಅವರಿಗೆ ಕೊಟ್ಟರು. ಅವರೆಲ್ಲರೂ ಅದರಲ್ಲಿ ಕುಡಿದರು.