Mark 14:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಂತರ ಯೇಸು ಶಿಷ್ಯರಿಗೆ, “ನೀವೆಲ್ಲರೂ ಭಯಗೊಂಡು ಹಿಂಜರಿಯುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ಅವರಿಗೆ, “ನೀವೆಲ್ಲರೂ ನನ್ನನ್ನು ಬಿಟ್ಟು ಓಡಿಹೋಗುವಿರಿ. ಏಕೆಂದರೆ; “‘ನಾನು ಕುರುಬನನ್ನು ಹೊಡೆಯುವೆನು; ಕುರಿಗಳು ಚದರಿ ಹೋಗುವವು’ ಎಂದು ಬರೆದಿದೆಯಲ್ಲಾ ಅಂದನು.
Kannada BSI Bible 2016
ಆಗ ಯೇಸು ಅವರಿಗೆ--ಈ ರಾತ್ರಿ ನೀವೆಲ್ಲರೂ ನನ್ನ ದೆಸೆಯಿಂದ ಅಭ್ಯಂತರಪಡುವಿರಿ; ಯಾಕಂದರೆನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಸಲ್ಪ ಡುವವು ಎಂದು ಬರೆದದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ಅವರಿಗೆ - ನೀವೆಲ್ಲರೂ ದಿಗಿಲು ಪಟ್ಟು ಹಿಂಜರಿಯುವಿರಿ. ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವವು ಎಂದು ಬರೆದದೆಯಲ್ಲಾ.
Kannada Bible (KNCL) BSI 2016
ಅನಂತರ ಯೇಸುಸ್ವಾಮಿ ಶಿಷ್ಯರಿಗೆ, “ ‘ಕುರುಬನನ್ನು ಕೊಲ್ಲುವೆನು ಕುರಿಗಳು ಚದರಿಹೋಗುವುವು’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವಂತೆ ನೀವು ಎಲ್ಲರೂ ನನ್ನಲ್ಲಿ ವಿಶ್ವಾಸ ಕಳೆದುಕೊಂಡು ಹಿಮ್ಮೆಟ್ಟುವಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೇಸು, “ನೀವೆಲ್ಲರೂ ಓಡಿಹೋಗುವಿರಿ. ಏಕೆಂದರೆ ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ ‘ನಾನು ಕುರುಬನನ್ನು ಹೊಡೆಯುವೆನು, ಕುರಿಗಳು ಚದರಿಹೋಗುವುವು.’