Mark 14:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬೆಥಾನಿಯದಲ್ಲಿ ಯೇಸು ಕುಷ್ಠರೋಗಿ ಸಿಮೋನನ ಮನೆಯಲ್ಲಿ ಊಟಮಾಡುತ್ತಿದ್ದಾಗ ಸ್ತ್ರೀಯೊಬ್ಬಳು ಆತನ ಬಳಿಗೆ ಬಂದಳು. ಆಕೆಯ ಬಳಿ ಅತ್ಯಂತ ಬೆಲೆಬಾಳುವ ಪರಿಮಳದ್ರವ್ಯದ ಭರಣಿ ಇತ್ತು. ಈ ಪರಿಮಳದ್ರವ್ಯವನ್ನು ಶುದ್ಧವಾದ ನಾರ್ಡ್‌ ತೈಲದಿಂದ ಮಾಡಲಾಗಿತ್ತು. ಆ ಸ್ತ್ರೀಯು ಭರಣಿಯನ್ನು ತೆರೆದು, ಆ ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಸ್ವಚ್ಛ ಜಟಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
Kannada BSI Bible 2016
ಬೇಥಾನ್ಯದಲ್ಲಿದ್ದ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಆತನು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಅತಿ ಶ್ರೇಷ್ಠವಾದ ಸುಗಂಧ ತೈಲದ ಭರಣಿ ಯನ್ನು ತೆಗೆದುಕೊಂಡು ಬಂದು ಅದನ್ನು ಒಡೆದು ಆತನ ತಲೆಯ ಮೇಲೆ ಹೊಯಿದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಇದ್ದು ಊಟಕ್ಕೆ ಕೂತಿದ್ದಾಗ ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ತೈಲದ ಭರಣಿಯನ್ನು ತೆಗೆದುಕೊಂಡು ಬಂದು ಆ ಭರಣಿಯನ್ನು ಒಡೆದು ತೈಲವನ್ನು ಆತನ ತಲೆಯ ಮೇಲೆ ಹೊಯಿದಳು.
Kannada Bible (KNCL) BSI 2016
ಯೇಸುಸ್ವಾಮಿ ಬೆಥಾನಿಯದಲ್ಲಿ, ಕುಷ್ಠರೋಗಿ ಸಿಮೋನನ ಮನೆಯಲ್ಲಿ ಇದ್ದರು. ಅಲ್ಲಿ ಊಟಕ್ಕೆ ಕುಳಿತಿದ್ದಾಗ, ಮಹಿಳೆಯೊಬ್ಬಳು ಅಮೃತಶಿಲೆಯ ಭರಣಿಯ ತುಂಬ ಅತ್ಯಮೂಲ್ಯವಾದ ಜಟಮಾಂಸಿ ಸುಗಂಧತೈಲವನ್ನು ತೆಗೆದುಕೊಂಡು ಬಂದು, ಭರಣಿಯನ್ನು ಒಡೆದು, ತೈಲವನ್ನು ಯೇಸುವಿನ ತಲೆಯ ಮೇಲೆ ಸುರಿದಳು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಬೇಥಾನ್ಯದಲ್ಲಿ ಕುಷ್ಠರೋಗಿಯಾದ ಸೀಮೋನನ ಮನೆಯಲ್ಲಿ ಊಟಕ್ಕೆ ಕುಳಿತಿದ್ದಾಗ, ಒಬ್ಬ ಸ್ತ್ರೀಯು ಬಹು ಬೆಲೆಯುಳ್ಳ ಅಚ್ಚ ಜಟಾಮಾಂಸಿ ಮೂಲಿಕೆಯ ಸುಗಂಧ ತೈಲದ ಭರಣಿಯನ್ನು ತೆಗೆದುಕೊಂಡು ಬಂದು, ಅದನ್ನು ಒಡೆದು, ಯೇಸುವಿನ ತಲೆಯ ಮೇಲೆ ಸುರಿಸಿದಳು.