Mark 14:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪೇತ್ರನು ಖಚಿತವಾಗಿ, “ನಾನು ನಿನ್ನೊಂದಿಗೆ ಸಾಯಬೇಕಾದರೂ ಸರಿಯೇ, ನಿನ್ನನ್ನು ತಿಳಿದೇ ಇಲ್ಲವೆಂದು ನಾನೆಂದಿಗೂ ಹೇಳುವುದಿಲ್ಲ” ಎಂದು ಉತ್ತರಿಸಿದನು. ಉಳಿದ ಶಿಷ್ಯರು ಸಹ ಇದೇ ರೀತಿ ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅವನು, “ನಾನು ನಿನ್ನ ಸಂಗಡ ಸಾಯಬೇಕಾಗಿ ಬಂದರೂ ನಿನ್ನನ್ನು ನಿರಾಕರಿಸುವುದೇ ಇಲ್ಲವೆಂದು” ಬಹು ಖಂಡಿತವಾಗಿ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.
Kannada BSI Bible 2016
ಆದರೆ ಅವನು--ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅಲ್ಲಗಳೆಯುವದಿಲ್ಲ ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಅವರೆಲ್ಲರೂ ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅವನು - ನಾನು ನಿನ್ನ ಸಂಗಡ ಸಾಯಬೇಕಾದರೂ ನಿನ್ನನ್ನು ಅರಿಯೆನೆಂಬದಾಗಿ ಹೇಳುವದೇ ಇಲ್ಲವೆಂದು ಬಹು ಖಂಡಿತವಾಗಿ ಮಾತಾಡಿದನು. ಅದರಂತೆ ಅವರೆಲ್ಲರೂ ಹೇಳಿದರು.
Kannada Bible (KNCL) BSI 2016
ಆದರೆ ಪೇತ್ರನು, “ನಾನು ತಮ್ಮೊಡನೆ ಸಾಯಬೇಕಾಗಿ ಬಂದರೂ ತಮ್ಮನ್ನು ಮಾತ್ರ ನಿರಾಕರಿಸೆನು,” ಎಂದು ಆವೇಶಪೂರಿತನಾಗಿ ನುಡಿದನು. ಹಾಗೆಯೇ ಉಳಿದವರೂ ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಪೇತ್ರನು, “ನಾನು ನಿಮ್ಮೊಂದಿಗೆ ಸಾಯಬೇಕಾದರೂ ನಿಮ್ಮನ್ನು ನಿರಾಕರಿಸುವುದೇ ಇಲ್ಲ,” ಎಂದು ಬಹು ಆವೇಶದಿಂದ ಹೇಳಿದನು. ಅದರಂತೆಯೇ ಶಿಷ್ಯರೆಲ್ಲರೂ ಹೇಳಿದರು.