Mark 14:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಮತ್ತು ಆತನ ಶಿಷ್ಯರು ಗೆತ್ಸೆಮನೆ ಎಂಬ ಸ್ಥಳಕ್ಕೆ ಹೋದರು. ಯೇಸು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥಿಸಿ ಬರುವ ತನಕ ಕುಳಿತಿರಿ” ಎಂದು ಹೇಳಿ
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ, “ನಾನು ಪ್ರಾರ್ಥನೆ ಮಾಡುವ ತನಕ, ನೀವು ಇಲ್ಲೇ ಕುಳಿತುಕೊಂಡಿರಿ” ಎಂದು ಹೇಳಿದನು.
Kannada BSI Bible 2016
ಆಗ ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದಾಗ ಆತನು ತನ್ನ ಶಿಷ್ಯರಿಗೆ--ನಾನು ಪ್ರಾರ್ಥನೆ ಮಾಡು ವಾಗ ನೀವು ಇಲ್ಲಿ ಕೂತುಕೊಂಡಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತರುವಾಯ ಅವರು ಗೆತ್ಸೇಮನೆ ಎಂಬ ತೋಟಕ್ಕೆ ಬಂದರು. ಆತನು ತನ್ನ ಶಿಷ್ಯರಿಗೆ - ಇಲ್ಲೇ ಕೂತುಕೊಳ್ಳಿರಿ, ನಾನು ಪ್ರಾರ್ಥನೆಮಾಡಿ ಬರುತ್ತೇನೆ ಎಂದು ಹೇಳಿ ಪೇತ್ರ ಯಾಕೋಬ ಯೋಹಾನರನ್ನು ತನ್ನ ಜೊತೆಯಲ್ಲಿ ಕರಕೊಂಡು ಹೋಗಿ
Kannada Bible (KNCL) BSI 2016
ತರುವಾಯ ಅವರೆಲ್ಲರೂ ಗೆತ್ಸೆಮನೆ ಎಂಬ ತೋಪಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಗೆತ್ಸೇಮನೆ ಎಂಬ ಸ್ಥಳಕ್ಕೆ ಬಂದರು. ಅಲ್ಲಿ ಯೇಸು ತಮ್ಮ ಶಿಷ್ಯರಿಗೆ, “ನಾನು ಪ್ರಾರ್ಥನೆಮಾಡಿ ಬರುವವರೆಗೆ ನೀವು ಇಲ್ಲಿ ಕುಳಿತುಕೊಂಡಿರಿ,” ಎಂದರು.