Mark 14:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಅವರಿಗೆ, “ನನ್ನ ಪ್ರಾಣವು ಸಾಯುವಷ್ಟು ದುಃಖದಿಂದ ತುಂಬಿಹೋಗಿದೆ. ಎಚ್ಚರವಾಗಿದ್ದು ಇಲ್ಲಿಯೇ ಕಾದುಕೊಂಡಿರಿ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಆತನು ಅವರಿಗೆ “ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ ನೀವು ಇಲ್ಲೇ ಕಾದುಕೊಂಡಿದ್ದು ಎಚ್ಚರವಾಗಿರಿ” ಎಂದು ಹೇಳಿದನು.
Kannada BSI Bible 2016
ನನ್ನ ಪ್ರಾಣವು ಸಾಯುವಷ್ಟು ಅತ್ಯಧಿಕವಾದ ದುಃಖಕ್ಕೆ ಒಳಗಾಗಿದೆ; ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರ್ರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಅವರಿಗೆ - ನನ್ನ ಪ್ರಾಣವು ಸಾಯುವಷ್ಟು ದುಃಖಕ್ಕೆ ಒಳಗಾಗಿದೆ. ನೀವು ಇಲ್ಲೇ ಇದ್ದು ಎಚ್ಚರವಾಗಿರ್ರಿ ಎಂದು ಹೇಳಿ ಸ್ವಲ್ಪ ಮುಂದೆ ಹೋಗಿ
Kannada Bible (KNCL) BSI 2016
ಅಲ್ಲಿ ಅತೀವ ದುಃಖದಿಂದ ಚಿಂತಾಕ್ರಾಂತರಾಗಿ, “ನನ್ನ ಮನೋವೇದನೆ ಪ್ರಾಣಹಿಂಡುವಷ್ಟು ತೀವ್ರವಾಗಿದೆ; ನೀವು ಇಲ್ಲೇ ಇದ್ದು ಎಚ್ಚರವಾಗಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಪ್ರಾಣವು ಸಾಯುವಷ್ಟು ತೀವ್ರವಾದ ದುಃಖಕ್ಕೆ ಒಳಗಾಗಿದೆ. ನೀವು ಇಲ್ಲಿಯೇ ಕಾದುಕೊಂಡಿದ್ದು ಎಚ್ಚರವಾಗಿರಿ,” ಎಂದರು.