Mark 14:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಳಿಕ ಯೇಸು, \tl “ಅಪ್ಪಾ\tl*, ತಂದೆಯೇ! ನಿನಗೆ ಎಲ್ಲವೂ ಸಾಧ್ಯ. ಈ ಸಂಕಟದ ಪಾತ್ರೆಯನ್ನು ನನ್ನಿಂದ ತೊಲಗಿಸು. ಆದರೆ ನನ್ನ ಚಿತ್ತದಂತೆ ಮಾಡದೆ, ನಿನ್ನ ಚಿತ್ತದಂತೆಯೇ ಮಾಡು” ಎಂದು ಪ್ರಾರ್ಥಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ. ಈ ಪಾನಪಾತ್ರೆಯನ್ನು ನನ್ನಿಂದ ತೆಗೆದುಬಿಡು ಆದರೂ ಇದು ನನ್ನ ಚಿತ್ತದಂತಲ್ಲ ನಿನ್ನ ಚಿತ್ತದಂತೆಯೇ ಆಗಲಿ” ಎಂದನು.
Kannada BSI Bible 2016
ಆತನು --ಅಪ್ಪಾ, ತಂದೆಯೇ, ಎಲ್ಲವುಗಳು ನಿನಗೆ ಸಾಧ್ಯವಾಗಿವೆ; ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು; ಆದರೂ ನನ್ನ ಚಿತ್ತದಂತಲ್ಲ, ನಿನ್ನ ಚಿತ್ತದಂತೆಯೇ ಆಗಲಿ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪ್ಪಾ, ತಂದೆಯೇ, ನಿನಗೆ ಎಲ್ಲವೂ ಸಾಧ್ಯ; ಈ ಪಾತ್ರೆಯನ್ನು ನನ್ನಿಂದ ತೊಲಗಿಸು; ಆದರೂ ನನ್ನ ಚಿತ್ತದಂತಾಗದೆ ನಿನ್ನ ಚಿತ್ತದಂತೆಯೇ ಆಗಲಿ ಅಂದನು.
Kannada Bible (KNCL) BSI 2016
ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅಪ್ಪಾ, ತಂದೆಯೇ, ಎಲ್ಲವೂ ನಿಮಗೆ ಸಾಧ್ಯ, ಈ ಪಾತ್ರೆಯನ್ನು ನನ್ನಿಂದ ತೆಗೆದುಬಿಡು. ಆದರೂ ನನ್ನ ಚಿತ್ತದಂತಲ್ಲ, ನಿಮ್ಮ ಚಿತ್ತದಂತೆಯೇ ಆಗಲಿ,” ಎಂದರು.