Mark 14:43 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಇನ್ನೂ ಮಾತಾಡುತ್ತಿರುವಾಗ, ಯೂದನು ಅಲ್ಲಿಗೆ ಬಂದನು. ಹನ್ನೆರಡು ಜನ ಅಪೊಸ್ತಲರಲ್ಲಿ ಯೂದನು ಒಬ್ಬನಾಗಿದ್ದನು. ಯೂದನೊಡನೆ ಕತ್ತಿ ಮತ್ತು ದೊಣ್ಣೆಗಳಿಂದ ಸುಸಜ್ಜಿತರಾಗಿದ್ದ ಅನೇಕ ಜನರಿದ್ದರು. ಮಹಾಯಾಜಕರು, ಧರ್ಮೋಪದೇಶಕರು ಮತ್ತು ಹಿರಿಯ ಯೆಹೂದ್ಯ ನಾಯಕರುಗಳು ಈ ಜನರನ್ನು ಕಳುಹಿಸಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಇನ್ನೂ ಮಾತನಾಡುತ್ತಾ ಇರುವಾಗಲೇ, ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಮುಖ್ಯಯಾಜಕರೂ, ಶಾಸ್ತ್ರಿಗಳೂ ಮತ್ತು ಹಿರಿಯರ ಕಡೆಯಿಂದ ಒಂದು ಗುಂಪು ಖಡ್ಗ, ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗೆ ಬಂದರು.
Kannada BSI Bible 2016
ಆತನು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆ ರಡು ಮಂದಿಯಲ್ಲಿ ಒಬ್ಬನಾದ ಯೂದನು ಬಂದನು; ಪ್ರಧಾನ ಯಾಜಕರ ಶಾಸ್ತ್ರಿಗಳ ಮತ್ತು ಹಿರಿಯರ ಕಡೆ ಯಿಂದ ಬಂದಿದ್ದ ಜನರ ದೊಡ್ಡ ಸಮೂಹವು ಕತ್ತಿ ದೊಣ್ಣೆಗಳನ್ನು ಹಿಡಿದುಕೊಂಡು ಅವನ ಕೂಡ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನು ಇನ್ನೂ ಮಾತಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮಹಾಯಾಜಕರು ಶಾಸ್ತ್ರಿಗಳು ಹಿರಿಯರು ಇವರ ಕಡೆಯಿಂದ ಒಂದು ಗುಂಪು ಕತ್ತಿದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು;
Kannada Bible (KNCL) BSI 2016
ಯೇಸುಸ್ವಾಮಿ ಇನ್ನೂ ಮಾತನಾಡುತ್ತ ಇರುವಾಗಲೇ, ಹನ್ನೆರಡುಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಅಲ್ಲಿಗೆ ಬಂದನು. ಖಡ್ಗಗಳನ್ನೂ ಲಾಠಿಗಳನ್ನೂ ಹಿಡಿದಿದ್ದ ಒಂದು ಗುಂಪು ಅವನೊಂದಿಗಿತ್ತು. ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಪ್ರಮುಖರೂ ಅವರನ್ನು ಕಳುಹಿಸಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಇನ್ನೂ ಮಾತನಾಡುತ್ತಿರುವಾಗಲೇ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು. ಮುಖ್ಯಯಾಜಕರ, ನಿಯಮ ಬೋಧಕರ ಮತ್ತು ಹಿರಿಯರ ಕಡೆಯಿಂದ ಬಂದಿದ್ದ ಜನರ ಸಮೂಹವು ಖಡ್ಗ ದೊಣ್ಣೆಗಳನ್ನು ಹಿಡಿದುಕೊಂಡು ಅವನೊಂದಿಗಿತ್ತು.