Mark 14:44 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು ಯಾರೆಂಬುದನ್ನು ಜನರಿಗೆ ತೋರಿಸಲು ಯೂದನು ಒಂದು ಉಪಾಯ ಮಾಡಿದನು. ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಯೇಸು. ಅವನನ್ನು ಸೆರೆಹಿಡಿದು ಎಚ್ಚರಿಕೆಯಿಂದ ಕಾಯುತ್ತಾ ಕರೆದುಕೊಂಡು ಹೋಗಿರಿ!” ಎಂದು ಹೇಳಿಕೊಟ್ಟಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಆತನನ್ನು ಹಿಡಿದುಕೊಡುವವನು ಅವರಿಗೆ, “ನಾನು ಯಾರಿಗೆ ಮುದ್ದಿಡುವೆನೊ ಅವನೇ ಆತನು! ಅವನನ್ನು ಹಿಡಿದು ಭದ್ರವಾಗಿ ಕರೆದೊಯ್ಯಿರಿ” ಎಂದು ಮೊದಲೇ ಸೂಚನೆಕೊಟ್ಟಿದ್ದನು.
Kannada BSI Bible 2016
ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ--ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಆತನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡು ಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಆತನನ್ನು ಹಿಡುಕೊಡುವವನು ಅವರಿಗೆ - ನಾನು ಯಾರಿಗೆ ಮುದ್ದಿಡುತ್ತೇನೋ ಅವನೇ ಆತನು; ಅವನನ್ನು ಹಿಡಿದು ಭದ್ರವಾಗಿ ತೆಗೆದುಕೊಂಡುಹೋಗಿರಿ ಎಂದು ಗುರುತು ಹೇಳಿಕೊಟ್ಟಿದ್ದನು.
Kannada Bible (KNCL) BSI 2016
ಗುರುದ್ರೋಹಿಯಾದ ಯೂದನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ, ಆತನೇ ಆ ವ್ಯಕ್ತಿ, ಆತನನ್ನು ಬಂಧಿಸಿ, ಭದ್ರವಾಗಿ ಕರೆದೊಯ್ಯಿರಿ,” ಎಂದು ಮೊದಲೇ ಸೂಚನೆಕೊಟ್ಟಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿಗೆ ದ್ರೋಹಮಾಡುವುದಕ್ಕಿದ್ದವನು ಅವರಿಗೆ, “ನಾನು ಯಾರಿಗೆ ಮುದ್ದಿಡುತ್ತೇನೋ ಆತನೇ ಯೇಸು, ಆತನನ್ನು ಹಿಡಿದು, ಭದ್ರವಾಗಿ ತೆಗೆದುಕೊಂಡು ಹೋಗಿರಿ,” ಎಂದು ಗುರುತು ಹೇಳಿಕೊಟ್ಟಿದ್ದನು.