Mark 14:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವನ್ನು ಬಂಧಿಸಿದ್ದ ಜನರು ಪ್ರಧಾನಯಾಜಕನ ಮನೆಗೆ ಆತನನ್ನು ಕರೆದುಕೊಂಡು ಹೋದರು. ಎಲ್ಲಾ ಮಹಾಯಾಜಕರುಗಳು, ಹಿರಿಯ ಯೆಹೂದ್ಯನಾಯಕರುಗಳು, ಹಾಗೂ ಧರ್ಮೋಪದೇಶಕರು ಅಲ್ಲಿ ಸೇರಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.
Kannada BSI Bible 2016
ಇದಾದ ಮೇಲೆ ಅವರು ಯೇಸುವನ್ನು ಮಹಾ ಯಾಜಕನ ಬಳಿಗೆ ತೆಗೆದುಕೊಂಡು ಹೋದರು; ಆತನ ಸಂಗಡ ಪ್ರಧಾನ ಯಾಜಕರೆಲ್ಲರೂ ಹಿರಿಯರೂ ಶಾಸ್ತ್ರಿಗಳೂ ಅವನ ಬಳಿಗೆ ಕೂಡಿ ಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಷ್ಟರಲ್ಲಿ ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಇವನ ಬಳಿಗೆ ಮಹಾಯಾಜಕರು ಹಿರಿಯರು ಶಾಸ್ತ್ರಿಗಳು ಇವರೆಲ್ಲರೂ ಕೂಡಿಬಂದರು.
Kannada Bible (KNCL) BSI 2016
ಅನಂತರ ಆ ಜನರು ಯೇಸುಸ್ವಾಮಿಯನ್ನು ಪ್ರಧಾನ ಯಾಜಕನ ಬಳಿಗೆ ಕರೆದೊಯ್ದರು. ಅಲ್ಲಿ ಎಲ್ಲಾ ಮುಖ್ಯಯಾಜಕರು, ಪ್ರಮುಖರು ಹಾಗು ಧರ್ಮಶಾಸ್ತ್ರಿಗಳು ಸಭೆ ಸೇರಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ಮಹಾಯಾಜಕನ ಬಳಿಗೆ ತೆಗೆದುಕೊಂಡು ಹೋದರು. ಯೇಸುವಿನ ಸಂಗಡ ಮುಖ್ಯಯಾಜಕರೂ ಹಿರಿಯರೂ ನಿಯಮ ಬೋಧಕರೂ ಅವನ ಬಳಿಗೆ ಸಭೆ ಕೂಡಿಬಂದರು.