Mark 14:54 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪೇತ್ರನು ಯೇಸುವನ್ನು ದೂರದಲ್ಲಿ ಹಿಂಬಾಲಿಸುತ್ತಾ ಪ್ರಧಾನಯಾಜಕನ ಮನೆಯ ಅಂಗಳದೊಳಕ್ಕೆ ಹೋಗಿ, ಕಾವಲುಗಾರರೊಡನೆ ಕುಳಿತುಕೊಂಡು ಬೆಂಕಿಯಿಂದ ಚಳಿಕಾಯಿಸಿಕೊಳ್ಳತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
Kannada BSI Bible 2016
ಆದರೆ ಪೇತ್ರನು ಮಹಾಯಾಜಕನ ಭವನದವರೆಗೂ ದೂರ ದಿಂದ ಆತನನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳು ತ್ತಿದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಪೇತ್ರನು ದೂರದಿಂದ ಆತನ ಹಿಂದೆ ಹೋಗುತ್ತಾ ಮಹಾಯಾಜಕನ ಮಠದ ಅಂಗಳದೊಳಗೂ ಬಂದು ಓಲೇಕಾರರ ಸಂಗಡ ಬೆಂಕಿಯ ಮುಂದೆ ಕೂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು.
Kannada Bible (KNCL) BSI 2016
ಪೇತ್ರನಾದರೋ ದೂರದಿಂದ ಯೇಸುವನ್ನು ಹಿಂಬಾಲಿಸುತ್ತಿದ್ದನು. ಅವನು ಪ್ರಧಾನಯಾಜಕನ ಭವನದವರೆಗೂ ಬಂದು ಹೊರಾಂಗಣದಲ್ಲಿ, ಪಹರೆಯವರ ಜೊತೆಯಲ್ಲಿ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೇತ್ರನು ಮಹಾಯಾಜಕನ ಅಂಗಳದವರೆಗೂ ದೂರದಿಂದಲೇ ಯೇಸುವನ್ನು ಹಿಂಬಾಲಿಸಿ ಆಳುಗಳ ಸಂಗಡ ಕೂತುಕೊಂಡು ಬೆಂಕಿಯ ಹತ್ತಿರ ಚಳಿ ಕಾಯಿಸಿಕೊಳ್ಳುತ್ತಿದ್ದನು.