Mark 14:60 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪ್ರಧಾನಯಾಜಕನು ಎಲ್ಲಾ ಜನರೆದುರಿಗೆ ಎದ್ದುನಿಂತು, ಯೇಸುವಿಗೆ, “ಈ ಜನರು ನಿನಗೆ ವಿರುದ್ಧವಾಗಿ ಹೊರಿಸುತ್ತಿರುವ ಈ ಆರೋಪಗಳ ಬಗ್ಗೆ ನೀನು ಏನಾದರೂ ಹೇಳಬೇಕೆಂದಿರುವೆಯೋ? ಜನರು ಹೇಳುತ್ತಿರುವುದು ನಿಜವೇ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.
Kannada BSI Bible 2016
ಆಗ ಮಹಾಯಾಜಕನು ಎದ್ದು ನಡುವೆ ನಿಂತು ಯೇಸುವಿಗೆ--ನೀನು ಏನೂ ಉತ್ತರಕೊಡುವದಿ ಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು ಎಂದು ಕೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಮಹಾಯಾಜಕನು ಎದ್ದು ನಡುವೆ ನಿಂತು - ನೀನೇನೂ ಉತ್ತರಹೇಳುವದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು? ಎಂದು ಯೇಸುವನ್ನು ಪ್ರಶ್ನಿಸಿದನು.
Kannada Bible (KNCL) BSI 2016
ಆಗ ಪ್ರಧಾನಯಾಜಕನು ಸಭೆಯ ಮಧ್ಯೆ ಎದ್ದುನಿಂತು, ಯೇಸುವನ್ನು ನೋಡಿ, “ಈ ಜನರು ನಿನಗೆ ವಿರುದ್ಧವಾಗಿ ತಂದಿರುವ ಆರೋಪಣೆಗಳನ್ನು ಕೇಳುತ್ತಿರುವೆಯಾ? ಇವುಗಳಿಗೆ ನಿನ್ನ ಉತ್ತರವೇನು?” ಎಂದು ಪ್ರಶ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಮಹಾಯಾಜಕನು ಎದ್ದು ಮುಂದೆ ನಿಂತು ಯೇಸುವಿಗೆ, “ನೀನು ಏನೂ ಉತ್ತರ ಕೊಡುವುದಿಲ್ಲವೋ? ಇವರು ನಿನಗೆ ವಿರೋಧವಾಗಿ ಹೇಳುವ ಈ ಸಾಕ್ಷಿ ಏನು?” ಎಂದು ಕೇಳಿದನು.